ರಾಜ್ಯಾದ್ಯಂತ ನಾಳೆಯಿಂದ ಮಳೆಯಾಗುವ ಸಾಧ್ಯತೆ ..!

03 Dec 2018 3:35 PM | General
604 Report

ಬಂಗಾಳಕೊಲ್ಲಿಯಲ್ಲಿ ಹಿಂಗಾರು ಚುರುಕಾಗಿರುವ ಕಾರಣ ಮಂಗಳವಾರದಿಂದ ಕರ್ನಾಟಕ ಸೇರಿ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಈಗಾಗಲೇ ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ತುಂತುರು ಅಥವಾ ಸಾಧಾರಣ ಮಳೆ, ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

Edited By

Manjula M

Reported By

Manjula M

Comments