ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್..!! ಏನ್ ಅಂತೀರಾ..?

ಪೋಷಕರಿಗೆ ಮಕ್ಕಳನ್ನು ಶಾಲೆಗೆ ಸೇರಿಸುವುದೆ ಒಂದು ದೊಡ್ಡ ತಲೆನೋವಾಗಿ ಬಿಡುತ್ತದೆ. ಏಕೆಂದರೆ ಮಕ್ಕಳನ್ನು ಒಳ್ಳೆಯ ಶಾಲೆಗೆ ಸೇರಿಸುವುದು ಹಾಗೂ ಅದಕ್ಕೆ ಡೊನೆಷನ್ ಹೊಂದಿಸುವುದೇ ದೊಡ್ಡ ಕೆಲಸವಾಗಿ ಬಿಟ್ಟಿರುತ್ತದೆ. ಆದರೆ ಇದೀಗ ಖಾಸಗಿ ಶಾಲೆಗಳಿಗೆ ಸೇರಿಸುವ ಮಕ್ಕಳಿಗೆ ಬಿಗ್ ಶಾಕ್ ನೀಡಿದೆ. ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯುವ ಮಕ್ಕಳಿಗೆ ಇನ್ಮುಂದೆ ಆರ್ ಟಿಇ ಅಡಿ ಶುಲ್ಕ ವಿನಾಯತಿ ಸಿಗುವುದಿಲ್ಲ.
ಈ ಕುರಿತು ಕಾಯಿದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಈಗಾಗಲೇ ನಿರ್ಧರಿಸಿದೆ. 5 ಕಿ.ಮೀ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳು ಇದ್ದೂ, ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯುವ ಮಕ್ಕಳಿಗೆ ಆರ್ ಟಿಇ ಶುಲ್ಕ ವಿನಾಯಿತಿ ಸಿಗುವುದಿಲ್ಲ. ಕೇರಳದಲ್ಲಿ ಈ ಮಾದರಿ ಅನುಸರಿಸಲಾಗುತ್ತಿದೆ. ಇದೇ ಮಾದರಿಯನ್ನು ರಾಜ್ಯದಲ್ಲೂ ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಪೋಷಕರು ಇನ್ನು ಮುಂದೆ ಖಾಸಗಿ ಶಾಲೆಯ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಯ ಕಡೆ ಗಮನ ಕೊಡಬೇಕಾಗಿರುವುದು ಎಲ್ಲರ ಕರ್ತವ್ಯ..
Comments