ರೆಬಲ್ ಸ್ಟಾರ್ ಅಂಬರೀಶ್ ಹುಟ್ಟೂರಿನಲ್ಲಿ ಅಭಿಮಾನಿಗಳಿಂದ ಪುಣ್ಯ ತಿಥಿ ಕಾರ್ಯ..

ಸ್ಯಾಂಡಲ್ ವುಡ್ ಕಲಿಯುಗದ ಕರ್ಣ, ರೆಬೆಲ್ ಸ್ಟಾರ್ ಅಂಬರೀಶ್ರವರ ನಿಧನದ ಹಿನ್ನಲೆಯಲ್ಲಿ ಅವರ ಸ್ವಗ್ರಾಮದಲ್ಲಿ ನೀರಸ ಮೌನ ಮನೆ ಮಾಡಿದೆ. ಇದೀಗ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡರಸಿನಕೆರೆಯಲ್ಲಿ ಗ್ರಾಮಸ್ಥರು ಹಾಗೂ ಅಭಿಮಾನಿಗಳು ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ತಿಥಿ ಕಾರ್ಯ ನೆರವೇರಿಸಿದ್ದಾರೆ.
ಬೆಳಗ್ಗೆಯಿಂದಲೇ ಪೂಜಾ ಕಾರ್ಯಗಳು ನೆರವೇರಿದ್ದು, ಕೆಲ ಅಭಿಮಾನಿಗಳು ಕೇಶಮುಂಡನ ಮಾಡಿಸಿಕೊಂಡು ತಿಥಿ ಕಾರ್ಯದಲ್ಲಿ ಭಾಗವಹಿಸಿದ್ದಾರೆ.. ಗ್ರಾಮಸ್ಥರು ಹಾಗೂ ಅಭಿಮಾನಿಗಳಿಗಾಗಿ ಸಸ್ಯಹಾರಿ ಊಟದ ವ್ಯವಸ್ಥೆಯನ್ನೂ ಕೂಡ ಮಾಡಲಾಗಿದೆ. ದೊಡ್ಡರಸಿನಕೆರೆ ಮಾತ್ರವಲ್ಲದೆ ಮಂಡ್ಯ ಜಿಲ್ಲೆಯ ಹಲವು ಗ್ರಾಮಗಳಲ್ಲೂ ಕೂಡ ಇಂದು ಅಂಬರೀಶ್ ಅವರ ತಿಥಿ ಕಾರ್ಯ ನಡೆಯುತ್ತಿದ್ದು, ಕೆಲವೆಡೆ ಮಾಂಸಾಹಾರ ಊಟ ತಯಾರಿಸಿ ಬಡಿಸಲಾಗುತ್ತಿದೆ. ಇದರಿಂದಲೇ ಗೊತ್ತಾಗುತ್ತದೆ ಅಂಬರೀಶ್ ಅವರು ಎಂತಹ ಅಭಿಮಾನಿಗಳನ್ನು ಸಂಪಾದಿಸಿದ್ದರು ಎಂದು,,,
Comments