ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಶ್ರೀಗಳು ಚೆನ್ನೈಗೆ ಶಿಫ್ಟ್..!!

ಆರೋಗ್ಯದಲ್ಲಿ ಕೊಂಚ ಏರುಪೇರಾಗಿರುವ ಹಿನ್ನಲೆಯಲ್ಲಿ ತುಮಕೂರು ಸಿದ್ದಗಂಗಾ ಮಠದ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಇಂದು ಶ್ರೀಗಳನ್ನು ಚೆನ್ನೈಗೆ ಶಿಫ್ಟ್ ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಶ್ರೀಗಳನ್ನು ತುಮಕೂರಿನ ಸಿದ್ದಗಂಗಾ ಮಠದಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಗುತ್ತಿದೆ. ಈಗಾಗಲೇ ಶ್ರೀಗಳಿಗೆ 5 ಸ್ಟಂಟ್ ಅಳವಡಿಸಿದ್ದು, ಮತ್ತೆ ಸ್ಟಂಟ್ ಅಳವಡಿಸಲು ಸಾಧ್ಯವಿಲ್ಲ ಎಂದು ಹೇಳಲಾಗುತ್ತಿದೆ...ಹೀಗಾಗಿ ಶಾಶ್ವತ ಪರಿಹಾರಕ್ಕಾಗಿ ಚೆನ್ನೈನಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಶ್ರೀಗಳಿಗೆ ಭಾರತದ ಖ್ಯಾತ ಲಿವರ್ ಸ್ಪೆಷಲಿಸ್ಟ್ ಡಾ. ಮೊಹಮ್ಮದ್ ರೇಲಾ ಶಸ್ತ್ರ ಚಿಕಿತ್ಸೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತದೆ..
Comments