ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ಇನ್ಮುಂದೆ ಪಂಚಾಯಿತಿಯಲ್ಲೇ ಬುಕ್ ಮಾಡಬಹುದು ರೈಲ್ವೆ ಟಿಕೆಟ್

ರಾಜ್ಯ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದು ಬಡವರಿಗೆ ಗ್ರಾಮೀಣ ಪ್ರದೇಶದವರಿಗೆ ಅನುಕೂಲವಾಗುವಂತೆ ಸಾಕಷ್ಟು ಅನುಕೂಲಗಳನ್ನು ಮಾಡಿಕೊಡುತ್ತಿದೆ.. ಗ್ರಾಮೀಣ ಪ್ರದೇಶದ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಇದೀಗ ಮತ್ತೊಂದ ಮಹತ್ವದ ಕಾರ್ಯಕ್ಕೆ ಮುಂದಾಗಿದೆ. 40 ಕ್ಕೂ ಅಧಿಕ ಕಂದಾಯ ಇಲಾಖೆಯ ಸೇವೆಗಳನ್ನು ಒದಗಿಸುತ್ತಿರುವ ಬಾಪೂಜಿ ಸೇವಾ ಕೇಂದ್ರದಲ್ಲಿ ಮತ್ತೊಂದು ಸೇವೆಯನ್ನು ಪರಿಚಯಿಸಲು ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿದೆ.
ಈ ಹೆಚ್ಚುವರಿ ಸೇವೆಯ ಅನುಷ್ಠಾನಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರವು ಸಿದ್ಧತೆಯನ್ನು ನಡೆದಿದ್ದು, ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಗ್ರಾಮೀಣ ಪ್ರದೇಶದ ಜನತೆ, ಪಂಚಾಯಿತಿಯಲ್ಲಿ ಬಸ್ ಮತ್ತು ರೈಲ್ವೆ ಪ್ರಯಾಣದ ಮುಂಗಡ ಟಿಕೆಟ್ ಗಳನ್ನು ಕಾಯ್ದಿರಿಸಬಹುದಾಗಿದೆ. ಮುಂದಿನ ಮೂರು ತಿಂಗಳೊಳಗಾಗಿ ಬಾಪೂಜಿ ಸೇವಾ ಕೇಂದ್ರದಲ್ಲಿ ಈ ಹೆಚ್ಚುವರಿ ಸೇವೆ ಆರಂಭವಾಗುವ ನಿರೀಕ್ಷೆಯಿದ್ದು, ಬಳಿಕ ಟೆಂಡರ್ ಅಥವಾ ಒಪ್ಪಂದದ ಮೂಲಕ ಬ್ಯಾಂಕ್ ಅಥವಾ ಖಾಸಗಿ ಕಂಪನಿಗೆ ನಿರ್ವಹಣೆಯ ಜವಾಬ್ದಾರಿ ವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Comments