ವಿಷಪ್ರಸಾದ ದುರಂತದ ಹಿನ್ನಲೆ: ಆರೋಪಿಗಳ ಪರ ವಕಾಲತ್ತು ವಹಿಸದಿರಲು ವಕೀಲರ ಸಂಘ ತೀರ್ಮಾನ

ಚಾಮರಾಜನಗರದ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತದ ಹಿನ್ನಲೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಗಳ ಪರ ವಾದ ಮಾಡದಿರಲು ಚಾಮರಾಜನಗರ ವಕೀಲರ ಸಂಘ ತೀರ್ಮಾನ ಮಾಡಿದೆ.
ಇಂದು ಬೆಳಗ್ಗೆ ವಕೀಲರ ಸಂಘ ವಿಷ ಪ್ರಸಾದ ದುರಂತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಲು ಸಭೆಯನ್ನು ಕರೆದಿದ್ದು, ಈ ವೇಳೆ ಬಂಧಿತ ಆರೋಪಿಗಳ ಪರ ವಕಾಲತ್ತು ವಹಿಸದಿರಲು ಒಮ್ಮತದಿಂದ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.. ಈ ಪ್ರಕರಣ ಸಂಬಂಧ ಈಗಾಗಲೇ ಏಳು ಮಂದಿ ವಿರುದ್ಧ ಸೆಕ್ಷನ್ 304ರಡಿ ಪ್ರಕರಣ ದಾಖಲಾಗಿದೆ. ಕಳೆದ ಶುಕ್ರವಾರ ಸುಳ್ವಾಡಿ ಕಿಚ್ಚು ಗುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕು ಸ್ಥಾಪನೆ ಸಮಾರಂಭದಲ್ಲಿ ವಿಷ ಪ್ರಸಾದ ಸೇವಿಸಿ ಇದುವರೆಗೂ 13 ಮಂದಿ ಸಾವಿಗೀಡಾಗಿದ್ದು, ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಪೊಲೀಸರು ಇದರ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ.
Comments