ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ "ಗುಡ್ ನ್ಯೂಸ್ ": ಫಲಾನುಭವಿಗಳು ಯಾರು..? ಇಲ್ಲಿದೆ ಕಂಪ್ಲಿಟ್ ಡೀಟೇಲ್ಸ್
ರಾಜ್ಯ ಸರ್ಕಾರವು ಈಗಾಗಲೇ ಸಾಕಷ್ಟು ಯೋಜನೆಗಳನ್ನು ತಂದಿದೆ.. ಇದರಿಂದ ಸಾಕಷ್ಟು ಜನರಿಗೆ ಅನುಕೂಲ ಕೂಡ ಆಗಲಿದೆ.ಬಡ್ಡಿರಹಿತ ಸಾಲ ಸೌಲಭ್ಯ ಒದಗಿಸುವ ಬಡವರ ಬಂಧು ಯೋಜನೆಯ ಲಾಭವನ್ನು ರಾಜ್ಯದಲ್ಲಿರುವ ಒಟ್ಟು 4.5 ಲಕ್ಷ ಬೀದಿಬದಿ ವ್ಯಾಪಾರಿಗಳ ಕುಟುಂಬಗಳಿಗೂ ತಲುಪಿಸಲಾಗುವುದು. ಅದೇ ರೀತಿ ಕಾಯಕ ಯೋಜನೆಯಡಿ ಮಹಿಳಾ ಸಂಘಗಳು ತಯಾರಿಸುವ ಉತ್ಪನ್ನಗಳನ್ನು ಸರ್ಕಾರದ ವತಿಯಿಂದಲೇ ಖರೀದಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಕಾಯಕ ಯೋಜನೆಯಡಿ ಮಹಿಳಾ ಸ್ವಸಹಾಯ ಸಂಘಗಳಿಗೆ ವಿವಿಧ ಬಗೆಯ ಉತ್ಪಾದನೆಗಳ ತಯಾರಿಕೆ ಮತ್ತು ಮಾರಾಟಕ್ಕೆ ತರಬೇತಿ ನೀಡಲಾಗುವುದು. ಅಂತಹ ಸಂಘಗಳು ತಯಾರಿಸುವ ಉತ್ಪನ್ನಗಳನ್ನು ಸರ್ಕಾರದ ಮೂಲಕವೇ ಖರೀದಿಸುವ ಮೂಲಕ ಅವರಿಗೆ ನೆರವಾಗುವ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.ಬಡವರು ಸಾಲದಿಂದ ಜೀವನ ನಿರ್ವಹಣೆ ಮಾಡುತ್ತಿದ್ದು, ಅವರಿಗೆ ಆರ್ಥಿಕ ನೆರವು ನೀಡಲು ಬಡವರ ಬಂಧು ಹಾಗೂ ಕಾಯಕ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು. ಇದರಿಂದ ಮಹಿಳೆಯರು ಸ್ವಾವಲಂಬಿಯಾಗಿ ಜೀವನ ನಡೆಸಬಹುದು.
Comments