ಇನ್ಮುಂದೆ ದೇವಸ್ಥಾನದ ಪ್ರಸಾದದ ಮೇಲೂ `ಎಕ್ಸ್ ಪೈರಿ' ಡೇಟ್ ಕಡ್ಡಾಯ..!!
ಇತ್ತಿಚಿಗಷ್ಟೆ ಸುಳ್ವಾಡಿ ಮಾರಮ್ಮ ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಿ ಸುಮಾರು 17 ಮಂದಿ ಸಾವನ್ನಪ್ಪಿದ್ದರು. ಈ ಹಿನ್ನಲೆಯಲ್ಲಿ ಎಲ್ಲಾ ದೇವಾಲಯಗಳಿಗೂ ಸಿಸಿ ಟಿವಿಯನ್ನು ಅಳವಡಿಸಬೇಕು ಎಂದು ತಿಳಿಸಿದ್ದಾರೆ. ಈ ರೀತಿಯ ದುರಂತ ಮತ್ತೆ ಸಂಭವಿಸಬಾರದು ಎಂದು ಅನೇಕ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಿದ್ದಾರೆ. ಇನ್ಮುಂದೆ ರಾಜ್ಯದ ದೇವಸ್ಥಾನಗಳಲ್ಲಿಯೂ ಕೂಡ ಪ್ಯಾಕ್ ಮಾಡಿ ವಿತರಿಸುವ ಪ್ರಸಾದದ ಮೇಲೂ ಕೂಡ ಎಕ್ಸ್ ಪೈರಿ ಡೇಟ್ ನಮೂದಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ.
ಸುಳ್ವಾಡಿ ಕಿಚ್ಚುಗತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ಘಟನೆ ನಂತರ ಎಚ್ಚೆತ್ತುಕೊಂಡಂತಹ ಆರೋಗ್ಯ ಇಲಾಖೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪ್ರಾಧಿಕಾರ ಮುಂಜಾಗ್ರತೆ ಕ್ರಮ ಕೈಗೊಳ್ಳಲು ಇದೀಗ ಮುಂದಾಗಿದೆ. ದೇವಸ್ಥಾನದ ಪ್ರಸಾದದ ಮೇಲೆ ತಯಾರಿಸಿದ ದಿನ ಹಾಗೂ ಎಷ್ಟು ದಿನಗಳವರೆಗೆ ಮಾತ್ರ ಸೇವಿಸಬಹುದು ಎಂಬ ಮಾಹಿತಿಯನ್ನು ನಮೂದಿಸುವುದು ಕಡ್ಡಾಯವಾಗಲಿದೆ. ಕೇಂದ್ರ ಸುರಕ್ಷತೆ ಹಾಗೂ ಗುಣಮಟ್ಟದ ಪ್ರಾಧಿಕಾರದ ನಿಯಮದ ಪ್ರಕಾರ ಎಕ್ಸ್ ಪೈರಿ ಡೇಟ್ ನಮೂದಿಸುವಂತೆ ಕ್ರಮಕೈಗೊಳ್ಳಲಾಗುತ್ತಿದ್ದು, ಮುಜರಾಯಿ ಇಲಾಖೆ ದೇವಾಲಯಗಳು ಸೇರಿದಂತೆ ಎಲ್ಲಾ ಖಾಸಗಿ ದೇವಾಲಯಗಳು ಹಾಗೂ ಮಠಗಳಿಗೂ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ.
Comments