ಭಯಪಡಬೇಡಿ, ನಡೆದಾಡುವ ದೇವರು ಆರೋಗ್ಯವಾಗಿದ್ದಾರೆ : ಕುಮಾರಸ್ವಾಮಿ
ತುಮಕೂರು ಶ್ರೀ ಸಿದ್ಧಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳನ್ನು ಸಿಎಂ ಕುಮಾರಸ್ವಾಮಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಶ್ರೀಗಳ ಆರೋಗ್ಯ ಸುಧಾರಣೆಗಾಗಿ ವೈದ್ಯರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಯಾರು ಆತಂಕ ಪಡುವ ಅಗತ್ಯವಿಲ್ಲ. ಶ್ರೀಗಳು ಆರೋಗ್ಯವಾಗಿದ್ದಾರೆ. ಭಕ್ತವೃಂದ ಭಯಪಡುವ ಅಗತ್ಯವಿಲ್ಲ. ಶ್ರೀಗಳು ಅತೀ ಶೀಘ್ರದಲ್ಲಿ ಗುಣಮುಖರಾಗಲಿದ್ದಾರೆ ಎಂದು ತಿಳಿಸಿದ್ದಾರೆ.ವೈದ್ಯರ ತಂಡಕ್ಕೆ ಭಕ್ತರ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ. ಶಿವಕುಮಾರ ಶ್ರೀಗಳು ಇಳಿ ವಯಸ್ಸಿನಲ್ಲಿ ಚಿಕಿತ್ಸೆಗೆ ಸ್ಪಂದಿಸುತ್ತಿರುವುದು ವೈದ್ಯಕೀಯ ಲೋಕಕ್ಕೆ ಅಚ್ಚರಿಯಾಗಿದೆ. ಪವಾಡ ಸದೃಶವಾಗಿ ಸ್ಪಂದಿಸುತ್ತಿದ್ದಾರೆ.
ಭಕ್ತರು ಶ್ರೀಗಳ ಆರೋಗ್ಯ ದೃಷ್ಠಿಯಿಂದ ಭೇಟಿ ಮಾಡಬಾರದು. ನಾನು ಕೂಡ ಭೇಟಿ ಕೊಡಬಾರದು ಅಂದುಕೊಂಡಿದ್ದೆ. ಕಿರಿಯ ಶ್ರೀಗಳ ಅನುಮತಿ ಪಡೆದು ಇಂದು ಭೇಟಿ ನೀಡಿದ್ದೇನೆ. ಧಾರವಾಡ ಸಾಹಿತ್ಯ ಸಮ್ಮೇಳನಕ್ಕೆ ತೆರಳುವ ಮಾರ್ಗ ಮಧ್ಯೆ ಶ್ರೀಗಳ ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದು ತೆರಳೋಣ ಅಂತಾ ಬಂದಿದ್ದೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು. ಸಿದ್ದಗಂಗಾ ಶ್ರೀಗಳು ಈ ಹಿಂದೆ ಸಾಕಷ್ಟು ಬಾರಿ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿದ್ದರು. ಪ್ರತೀ ಬಾರಿಯೂ ಶ್ರೀಗಳು ಗುಣಮುಖರಾಗಲೆಂದು ಮಠದ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.ಇಷ್ಡು ಇಳಿ ವಯಸ್ಸಿನಲ್ಲಿಯೂ ಶ್ರೀಗಳು ಚಿಕಿತ್ಸೆಗೆ ಸ್ಪಂಧಿಸಿರುವುದು ನಿಜಕ್ಕೂ ಅಚ್ಚರಿಯೇ ಸರಿ.
Comments