ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿತ..!!
ಅನ್ಯ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿಒದ್ದ ವ್ಯಕ್ತಿಯೊಬ್ಬ ಮನೆಯಲ್ಲಿಯೇ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಕಾಮುಕನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆ ಮನಗೂಳಿ ಸಮೀಪದ ಅಗಸಿ ಗ್ರಾಮದ ಮನೆಯಲ್ಲಿ ಕಾಮುಕ ಸಿಕ್ಕಿಬಿದ್ದಿದ್ದು, ಮಹಿಳೆಯ ಸಂಬಂಧಿಕರು ಥಳಿಸಿದ್ದಾರೆ. ಮಹಿಳೆಯ ಜೊತೆ ಹಲವು ದಿನಗಳಿಂದಲೂ ಸಂಬಂಧ ಹೊಂದಿದ್ದ ಈತ ಮಹಿಳೆ ಜೊತೆ ಸರಸ-ಸಲ್ಲಾಪದಲ್ಲಿ ತೊಡಗಿದ್ದ ವೇಳೆಯಲ್ಲಿ ರೆಡ್ ಹ್ಯಾಂಡ್ ಆಗಿಯೇ ಸಿಕ್ಕಿಬಿದ್ದಿದ್ದಾರೆ.
ಆರೋಪಿ ಶಿಕ್ಷಣ ಸಂಸ್ಥೆ ನಡೆಸುತ್ತಿದ್ದನು. ಅಲ್ಲದೇ ಅದೇ ಸಂಸ್ಥೆಯ್ಲಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ಹಿಂದೆಯೇ ಅನೇಕ ಬಾರಿ ಮಹಿಳೆ ಸಂಬಂಧಿಕರು ಎಚ್ಚರಿಕೆ ನೀಡಿದ್ರೂ, ಗುಪ್ತವಾಗಿ ಓಡಾಡಿಕೊಂಡಿದ್ದರು. ಆದರೆ ಈಗ ರೆಡ್ ಹ್ಯಾಂಡ್ ಆಗಿಯೇ ಸಿಕ್ಕಿಬಿದ್ದಿದ್ದಾರೆ. ರಾಜಕೀಯ ಪಕ್ಷಗಳ ಮುಖಂಡರ ಆಪ್ತನಾಗಿರುವ ಕಾಮುಕನಿಗೆ ಮಹಿಳೆಯ ಸಂಬಂಧಿಕರು ಹಿಂದೆಯೇ ಎಚ್ಚರಿಕೆ ನೀಡಿದ್ದರೆನ್ನಲಾಗಿದೆ. 3 ತಿಂಗಳ ಹಿಂದೆ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಈಗ ವೈರಲ್ ಆಗಿದೆ.
Comments