ರಾಮಮಂದಿರ ನಿರ್ಮಾಣಕ್ಕೆ ನಮ್ಮದೇನು ತಕರಾರು ಇಲ್ಲ, ಅಡ್ಡಗಾಲು ಹಾಕ್ತಿರೋದು ಕಾಂಗ್ರೆಸ್!

ಅದೇ ಸ್ಥಳದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಪಕ್ಷ ಬದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಘೋಷಿಸಿದ್ದಾರೆ. ರಾಮಲೀಲಾ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು ರಾಮ ಮಂದಿರ ನಿರ್ಮಾಣ ಮಾಡಲು ನಮ್ಮ ಪಕ್ಷ ಬದ್ದವಾಗಿದೆ. ಇದಕ್ಕಾಗಿ ನಾವು ಸದಾ ಸಿದ್ಧರಾಗಿದ್ದೇವೆ ಎಂದು ಹೇಳಿದ್ದಾರೆ. ಆದರೆ ರಾಮ ಮಂದಿರ ನಿರ್ಮಾಣಕ್ಕೆ ಕಾಂಗ್ರೆಸ್ ಪಕ್ಷವೇ ಅಡ್ಡಗಾಲು ಹಾಕುತ್ತಿದೆ.
ಏನೇ ಅಡೆತಡೆ ಬಂದರೂ ಪಕ್ಷ ನಿಗದಿತ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಮಹಾ ಮೈತ್ರಿಯ ಕುರಿತು ಮಾತನಾಡಿದ ಅವರು, ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಎಲ್ಲ ಪಕ್ಷಗಳು ಒಂದಾಗಿದ್ದು, ಅವರ ಈ ಪ್ರಯತ್ನ ಎಂದಿಗೂ ಫಲಿಸುವುದಿಲ್ಲ ಎಂದು ಹೇಳಿದ್ದಾರೆ.
Comments