ಸಿದ್ಧಗಂಗಾ ಶ್ರೀಗಳ ಆರೋಗ್ಯ ಗಂಭೀರ...!!!

ಸಿದ್ಧಗಂಗಾ ಶ್ರೀ ಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಕ್ತರಲ್ಲಿ ಆತಂಕ ಮನೆ ಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ತುಮಕೂರು ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ 111 ವರ್ಷ ತುಂಬಿದ್ದು ಕಳೆದ ತಿಂಗಳಷ್ಟೇ ಚೆನ್ನೈನಲ್ಲಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿತ್ತು. ಅವರು ಸದ್ಯಕ್ಕೆ ತುಮಕೂರಿನ ಮಠದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿಯನ್ನು ಬಲ್ಲ ಮೂಲಗಳು ತಿಳಿಸಿವೆ. ಈಗಾಗಲೇ ಮಠಕ್ಕೆ ಸಾಗರೋಪಾದಿಯಲ್ಲಿ ಜನಸಾಗರ ಹರಿದು ಬರುತ್ತಿದ್ದು, ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೇ ಹಲವು ರಾಜಕೀಯ ಗಣ್ಯರು ತಮ್ಮೆಲ್ಲಾ ಕಾರ್ಯಗಳನ್ನು ಅರ್ಧಕ್ಕೆ ನಿಲ್ಲಿಸಿ ಮಠದತ್ತ ದೌಡಾಯಿಸಿದ್ದು ಜನರಲ್ಲಿ ಮತ್ತಷ್ಟು ಆತಂಕ ಸೃಷಿಸಿದೆ. ಹಲವು ದಿನಗಳಿಂದ ಶ್ರೀಗಳ ಆರೋಗ್ಯದಲ್ಲಿ ಏರು-ಪೇರು ಕಂಡುಬರುತ್ತಿತ್ತು. ಕಲೆವೊಮ್ಮೆ ಪವಾಡದ ರೀರಿಯಲ್ಲಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿತ್ತು. ಆದರೆ ಮುಂಜಾವಿನಿಂದ ಶ್ರೀ ಗಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಕೆಲ ಮೂಲಗಳಿಂದ ಹೊರ ಬಂದ ಕೂಡಲೇ ಭಕ್ತಾದಿಗಳು ಮಠದತ್ತ ಧಾವಿಸಿ ಬರುತ್ತಿದ್ದಾರೆ. ಸಾರ್ವಜನಿಕರು ಹಲವು ವೋಮ-ಹವನಗಳ ಮೂಲಕ ಶ್ರೀಗಳು ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.
Comments