ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಮತ್ತೊಂದು ಸಂಕಷ್ಟ..!!

ಅದ್ಯಾಕೋ ಗೊತ್ತಿಲ್ಲ… ಸಿಎಂ ಕುಮಾರಸ್ವಾಮಿ ಅಧಿಕಾರ ಸ್ವೀಕಾರ ಮಾಡಿದ್ದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆ ಕುಮಾರಣ್ಣನಿಗೆ ಎದುರಾಗುತ್ತಲೆ ಇದೆ. ಇದೀಗ ಜಂತಕಲ್ ಅಕ್ರಮ ಗಣಿಗಾರಿಕೆ ಹಗರಣದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಹೈಕೋರ್ಟ್ ನಲ್ಲಿ ಪಿಐಎಲ್ ಅರ್ಜಿ ಸಲ್ಲಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಜಂತಕಲ್ ಎಂಟರ್ ಪ್ರೈಸಸ್ ಗಣಿ ಪರವಾನಗಿ ನವೀಕರಣ ವಿಚಾರವಾಗಿ ಅವ್ಯವಹಾರ ನಡೆಸಿದ ಆರೋಪ ಸಂಬಂಧ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧದ ದೋಷಾರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಹಾಗೂ ಸಿಎಂ ವಿರುದ್ದ ಕಾನೂನು ಕ್ರಮ ಜರುಗಿಸಲು ಎಸ್ ಐಟಿಗೆ ನಿರ್ದೇಶಿಸುವಂತೆ ಹರೀಶ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಇಲ್ಲಿತನಕ ಯಾವುದೇ ನ್ಯಾಯಾಲಯ ತನಿಖೆಗೆ ಮಧ್ಯಂತರ ತಡೆ ನೀಡಿಲ್ಲ. ಆದರೂ ಸಹ ಪ್ರಕರಣದ ತನಿಖೆಯನ್ನು ಎಸ್ ಐಟಿ ಸಂಪೂರ್ಣವಾಗಿ ನಿಲ್ಲಿಸಿದೆ. ಆದಷ್ಟು ಬೇಗ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಸೂಚಿಸುವಂತೆ ಅರ್ಜಿಯಲ್ಲಿ ಹೈಕೋರ್ಟ್ ಗೆ ಹರೀಶ್ ಎಂಬುವವರು ಮನವಿ ಮಾಡಿದ್ದಾರೆ. ಇದನ್ನೆಲ್ಲಾ ನೋಡುತ್ತಿದ್ದರೆ ಆಪರೇಷನ್ ಕಮಲದ ಕೈವಾಡ ಇರಬಹುದು ಎಂದರೂ ಕೂಡ ಯಾವುದು ಸ್ಪಷ್ಟವಾಗಿಲ್ಲ..
Comments