ಇಂದು `ಬಿಬಿಎಂಪಿ' ಬಜೆಟ್ ಮಂಡನೆ- ಹೊಸ ಯೋಜನೆ ಷೋಷಣೆಯಾಗುವ ಸಾಧ್ಯತೆ..!!
ವಿಧಾನಸಭಾ ಚುನಾವಣೆ ಮುಗಿದ ಮೇಲೆ ಸದ್ಯ ಇಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2019-20 ನೇ ಸಾಲಿನ ಬಿಬಿಎಂ ಬಜೆಟ್ ಇಂದು ಮಂಡನೆಯಾಗಲಿದೆ. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಅವರು ಇಂದು ಬಜೆಟ್ ಮಂಡನೆ ಮಾಡಲಿದ್ದಾರೆ.. ಬಜೆಟ್ ಗಾತ್ರ ಸುಮಾರು 12 ಸಾವಿರ ಕೋಟಿ ತಲುಪುವ ನಿರೀಕ್ಷೆಯಿದೆ.. ಈ ಬಾರಿಯ ಬಜೆಟ್ ನಲ್ಲಿ ನಗರದ ಮಹಿಳೆಯರಿಗೆ ಹಲವು ಹೊಸ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಷ್ಟೆ ಅಲ್ಲದೆ ಇನ್ನು ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿಯವರ ಹೆಸರಿನಲ್ಲಿ ನಗರದ ಅತ್ಯುತ್ತಮ ಶಿಕ್ಷಣ ಸಂಸ್ಥೆಗೆ ಪ್ರಶಸ್ತಿ ಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ... ಬಿಬಿಎಂಪಿಯ ಎಲ್ಲ ವಿಭಾಗಗಳೊಂದಿಗೆ ಚರ್ಚೆ ನಡೆಸಿರುವ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರು ಬಜೆಟ್ ನಲ್ಲಿ ಯಾವೆಲ್ಲಾ ಯೋಜನೆ ಘೋಷಿಸಬೇಕು ಎಂಬುದನ್ನು ಅಂತಿಮಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿ ಬಿಬಿಎಂಪಿ ಬಜೆಟ್ನಲ್ಲಿ ಯಾರಿಗೆ ಯಾವ ರೀತಿಯ ಸವಲತ್ತುಗಳು ಸಿಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.. ಒಟ್ಟಾರೆಯಾಗಿ 2019 -20 ನೇ ಸಾಲಿನ ಬಜೆಟ್ ಗೆ ಈಗಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ.
Comments