ಬಿಬಿಎಂಪಿ ಬಜೆಟ್’ನಲ್ಲಿ ಸಿಲಿಕಾನ್ ಸಿಟಿ ಜನರಿಗೆ ಸಿಕ್ತು ಭರ್ಜರಿ ಗುಡ್ ನ್ಯೂಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2019-20 ನೇ ಸಾಲಿನ ಬಜೆಟ್ ಮಂಡನೆ ಆರಂಭವಾಗಿದ್ದು, 10,691 ಕೋಟಿ ರೂ. ಗಾತ್ರದ ಬಜೆಟ್ ಅನ್ನು ಆರ್ಥಿಕ ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಾಲತಾ ಅವರು ಮಂಡಿಸುತ್ತಿದ್ದಾರೆ.. ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಗೋಪಾಲಯ್ಯ ಅವರು ಇಂದು ಬಜೆಟ್ ಮಂಡಿಸಿದ್ದಾರೆ.
ಬಜೆಟ್ ಆಯವ್ಯಯ ಸುಮಾರು 12 ಸಾವಿರ ಕೋಟಿ ತಲುಪುವ ಸಾಧ್ಯತೆಯಿದೆ.. ಈ ಬಾರಿಯ ಬಜೆಟ್ ನಲ್ಲಿ ನಗರದ ಮಹಿಳೆಯರಿಗೆ ಹಲವು ಹೊಸ ಯೋಜನೆಗಳು ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಿಲಿಕಾನ್ ಸಿಟಿ ಜನರಿಗೆ ಬಿಬಿಎಂಪಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ನಗರದ 400 ಸ್ಥಳಗಳಲ್ಲಿ ಉಚಿತ ವೈಫೈ ವ್ಯವಸ್ಥೆಗೆ ಘೋಷಣೆ ಮಾಡಲಾಗಿದೆ. ಜೊತೆಗೆ ಮಹಿಳೆಯರಿಗೆ ಅನ್ನಪೂರ್ಣೇಶ್ವರಿ ಯೋಜನೆ, ಸ್ವಂತ ಉದ್ಯೋಗಕ್ಕೆ ಸಂಚಾರಿ ವಾಹನ ಸೌಲಭ್ಯ. ಮಹಿಳೆಯರಿಗೆ ಆರೋಗ್ಯ ಕವಚ ಯೋಜನೆ ಜಾರಿ ಮಾಡಲಾಗಿದೆ. ಒಟ್ಟಾರೆಯಾಗಿ ಬಿಬಿಎಂಪಿ ಬಜೆಟ್ ನಿಂದ ಜನರಿಗೆ ಸಹಾಯವಾಗಲಿದೆ..
Comments