ಬಿಜೆಪಿ ಶಾಸಕರ ಕಾರು ಅಪಘಾತ- ಇಬ್ಬರು ಸ್ಥಳದಲ್ಲಿಯೇ ಸಾವು..!!
ರಾತ್ರಿ ಸುಮಾರು 1.30 ರ ವೇಳೆಯಲ್ಲಿ ರಾಷ್ಟ್ರೀಯ ಹೆದ್ದಾರಿ 75ರ ಪಕ್ಕದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಇಬ್ಬರಿಗೆ ಬಿಜೆಪಿ ಶಾಸಕ ಸಿ.ಟಿ. ರವಿ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ.ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಉರ್ಕೇಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ಎಪ್ಪತ್ತೈದುರಲ್ಲಿ ಈ ಘಟನೆ ನಡೆದಿದೆ. ಸಾವನ್ನಪ್ಪಿರುವವರನ್ನು ಸುನಿಲ್ ಗೌಡ ಮತ್ತೆ ಶಶಿಕುಮಾರ್ ಎಂದು ಗುರುತು ಮಾಡಲಾಗಿದೆ.
ಕನಕಪುರ ತಾಲ್ಲೂಕಿನ ಸೂರನಹಳ್ಳಿಯ ಯುವಕರಾದ ಸುನಿಲ್ ಮತ್ತು ಶಶಿಕುಮಾರ್ ಅವರು ಕೊಲ್ಲೂರು ಧರ್ಮಸ್ಥಳ ದೇವಾಲಯಗಳ ದರ್ಶನ ಮಾಡಿ ವಾಪಸ್ ತೆರಳುವಾಗ ಈ ಘಟನೆ ನಡೆದಿದೆ.. ಮಂಗಳೂರು ಕಡೆಯಿಂದ ಬಂದಿರುವ ಶಾಸಕರ ಫಾರ್ಚುನರ್ ಕಾರು ರಸ್ತೆ ಬದಿ ನಿಂತಿದ್ದ ಕಾರುಗಳಿಗೆ ಡಿಕ್ಕಿಯಾಗಿ ನಿಂತಿದ್ದವರ ಮೇಲೆ ಹರಿದಿದೆ. ಈ ವೇಳೆ ಗಾಯಗೊಂಡ ಮುನಿರಾಜು ಜಯಚಂದ್ರ ಪುನೀತ್, ಮಂಜುನಾಥ್ ಎಂಬುವರಿಗೆ ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸಿಟಿ ರವಿ ಮತ್ತು ಅವರ ಜೊತೆ ಪ್ರಯಾಣಿಸುತ್ತಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.
Comments