ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಕ್ತು ಕೆಎಸ್'ಆರ್'ಟಿಸಿ ಯಿಂದ ಗುಡ್ ನ್ಯೂಸ್..?!

ಫೆಬ್ರವರಿ ಕಳೆಯುತ್ತಿದೆ ಎಂದರೆ ಎಕ್ಸಾಮ್ ಫೀವರ್ ಜಾಸ್ತಿಯಾಗುತ್ತಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಆರಂಭವಾಗುತ್ತಿದೆ. ಈ ಬಾರಿ ಪರೀಕ್ಷೆ ಬರೆಯುವ ಮಕ್ಕಳಿಗೆ KSRTC ಕಡೆಯಿಂದ ಗುಡ್ ನ್ಯೂಸ್ ವೊಂದು ಸಿಕ್ಕಿದೆ. ಆತುರಾತುರವಾಗಿ ಎಲ್ಲೆಲ್ಲಿಂದ ಪರಿಕ್ಷಾ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್ಆರ್’ಟಿಸಿ ಬಸ್ ನಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಹಿಂದೆಯೇ ವಿದ್ಯಾರ್ಥಿಗಳ ಪರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕೆಂದು ಕೇಳಿಕೊಂಡಿತ್ತು ಅದರಂತೇ, ವಿದ್ಯಾರ್ಥಿಗಳು ತಮ್ಮ ಕಾಲೇಜುಗಳಷ್ಟೇ ಅಲ್ಲಾ, ಇತರೆ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದ್ದರೇ ಬಸ್ ನಲ್ಲಿ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪ್ರಯಾಣಿಸಬಹುದು.
ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ನಿಗಮದ ಬಸ್‌ಗಳನ್ನು ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮನವಿ ಮಾಡಿತ್ತು.ಅದರನ್ವಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಲ್ಲಿ ಅಂದರೆ ಮಾರ್ಚ್ 1ರಿಂದ ಮಾರ್ಚ್ 18ರವರೆಗೆ ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಮತ್ತು ಪರೀಕ್ಷಾ ಕೇಂದ್ರದಿಂದ ಹಿಂದಿರುಗುವಾಗ ಪರೀಕ್ಷಾ ಪ್ರವೇಶಪತ್ರ ತೀರಿಸಿ ಬಸ್ ಹತ್ತ ಬಹುದಾಗಿದೆ. ನಿಗಮದ ನಗರ, ಹೊರ ವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿಉಚಿತವಾಗಿ ಪ್ರಯಾಣಿಸಬಹುದಾಗಿದೆ.ಈ ಮಾರ್ಗದಲ್ಲಿ ವಿದ್ಯಾರ್ಥಿಗಳ ಕೋರಿಕೆ ಮೇರೆಗೆ ನಿಲುಗಡೆ, ಮತ್ತು ವಿದ್ಯಾರ್ಥಿಗಳನ್ನು ಹತ್ತಿಸಿಕೊಳ್ಳಲು ಕೆಎಸ್ಆರ್’ಟಿಸಿ ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ಕೆಎಸ್’ಆರ್ಟಿಸಿ ವ್ಯವಸ್ಥಾಪಕರು ತಿಳಿಸಿದ್ದಾರೆ.
Comments