ಹಾಸನ ಜಿಲ್ಲಾಧಿಕಾರಿಯಾದ ರೋಹಿಣಿ ಸಿಂಧೂರಿ ವರ್ಗಾವಣೆ..!
ಇದೀಗ ರಾಜ್ಯ ಸರ್ಕಾರವು ಜಿಲ್ಲಾಧಿಕಾರಿಯಾದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಿ ಎಂದು ಅದೇಶವನ್ನು ಹೊರಡಿಸಿದೆ. ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಹಾಗೂ ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಂ ಪಾಷಾ ಅವರನ್ನು ನೇಮಕ ಮಾಡಲಾಗಿದೆ. ರೋಹಿಣಿ ಸಿಂಧೂರಿ ಅವರನ್ನು 2017 ರ ಜುಲೈ 23 ರಂದು ಹಾಸನ ಡಿಸಿಯಾಗಿ ನೇಮಕ ಮಾಡಲಾಗಿತ್ತು. 2018 ರ ಫೆ. 6 ರಂದು ಅವರನ್ನು ವರ್ಗಾವಣೆ ಮಾಡಲಾಗಿತ್ತು. ರೋಹಿಣಿ ಸಿಂಧೂರಿ ಅವರು ವರ್ಗಾವಣೆ ವಿರುದ್ಧ ಕಾನೂನು ಹೋರಾಟ ಮಾಡಿ ಗೆಲುವು ಸಾಧಿಸಿ ಮತ್ತೆ ಹಾಸನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಇದೀಗ ರಾಜ್ಯ ಸರ್ಕಾರವು ರೋಹಿಣಿ ಸಿಂಧೂರಿಯವರನ್ನು ವರ್ಗಾವಣೆ ಮಾಡುವಂತೆ ಆದೇಶವನ್ನು ಹೊರಡಿಸಿದೆ.
Comments