‘ಕನ್ನಡದ ನಾಡೋಜ’ ಕೊ. ಚನ್ನಬಸಪ್ಪ ಇನ್ನಿಲ್ಲ…!!!
ಕನ್ನಡದ ಹಿರಿಯ ಸಾಹಿತಿ, ಸ್ವಾತಂತ್ರ್ಯ ಹೋರಾಟಗಾರ ಕೊ. ಚನ್ನಬಸಪ್ಪ ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 96 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ನಿಮಿತ್ತ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅಂದಹಾಗೇ ಕವಿ ಚನ್ನಬಸಪ್ಪ ಟಿಪ್ಪು ಜಯಂತಿ ಆಚರಣೆಯ ಸಮಯ ವಿವಾದಾತ್ಮಕ ಹೇಳಿಕೆ ನೀಡಿ ದೊಡ್ಡ ಸುದ್ದಿಯಾಗಿದ್ದರು.
ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಮಡುಗು ಸಮೀಪದ ಆಲೂರಿನಲ್ಲಿ ಹುಟ್ಟಿದ ಚನ್ನಬಸಪ್ಪ ನಿವೃತ್ತ ನ್ಯಾಯಾಧೀಶರಾಗಿಯೂ ಸೇವೆ ಸಲ್ಲಿಸಿದ್ದರು. ಖಜಾನೆ, ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯ ಸಮೀಕ್ಷೆ, ರಕ್ತತರ್ಪಣ, ಹಿಂದಿರುಗಿ ಬರಲಿಲ್ಲ, ನ್ಯಾಯಾಲಯದ ಸತ್ಯಕಥೆಗಳು, ಪ್ರಾಣಪಕ್ಷಿ, ಹೃದಯ ನೈವೇದ್ಯ ಮುಂತಾದ ಹಲವು ಕೃತಿಗಳನ್ನು ಅವರು ರಚಿಸಿದ್ದರು.ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗಿಯಾಗಿ ಸೆರೆಮನೆವಾಸ ಕೂಡ ಅನುಭವಿಸಿದ್ದರು ಆಗ ಅವರು ವಿದ್ಯಾರ್ಥಿಯಾಗಿದ್ದಂತಹ ಕಾಲ. ಕನ್ನಡದ ನಾಡೋಜ ಎಂದೇ ಪ್ರಖ್ಯಾತಿಯಾಗಿದ್ದ ಕೋ, ಚನ್ನಬಸಪ್ಪ ಅವರು ಐವರು ಮಕ್ಕಳನ್ನು ಅಗಲಿದ್ದಾರೆ.ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಮತ್ತು ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್ ಪ್ರಶಸ್ತಿಗೂ ಭಾಜನರಾಗಿದ್ದರು ರಾಷ್ಟ್ರಕವಿ ಆಯ್ಕೆ ಸಮಿತಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು
Comments