ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ವಿಧಿವಶ..

ಕಳೆದ ಹಲವು ದಿನಗಳಿಂದಲೂ ಕೂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದಂತಹ ಗೋವಾ ಮುಖ್ಯಮಂತ್ರಿ ಮನೋಹರ್ ಅವರು ಭಾನುವಾರ ಪಣಜಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಗೋವಾದ ಮಾಪುಸದಲ್ಲಿ ಮನೋಹರ್ ಪರಿಕರ್ ಹುಟ್ಟಿದ್ದು ಮಾರ್ಗೋವಾದ ಲಯೋಲಾ ಪ್ರೌಢಶಾಲೆಯಲ್ಲಿ ಮರಾಠಿಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ನಂತರ 1978ರಲ್ಲಿ ಐಐಟಿ ಬಾಂಬೆಯಲ್ಲಿ ಮೆಟಲರ್ಜಿಕಲ್ ಇಂಜಿನಿಯರಿಂಗ್ ನಲ್ಲಿ ಪದವಿ ಮಾಡಿದ್ದಾರೆ.
ಮನೋಹರ್ ಪರಿಕ್ಕರ್ ನಿಧನಕ್ಕೆ ಗಣ್ಯಾತಿ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ , ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮೂಲಕ ಸಂತಾಪವನ್ನು ಸೂಚಿಸಿ ಕಂಬನಿ ಮಿಡಿದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಮನೋಹರ್ ಪರಿಕ್ಕರ್ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿತ್ತು. ಆದರೆ ಇದೇ ಜನವರಿಯಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಪರಿಕ್ಕರ್ ಅವರು, 'ಕೊನೆಯ ಉಸಿರು ಇರುವವರೆಗೂ ಗೋವಾದ ಸೇವೆ ಮಾಡುತ್ತೇನೆ' ಎಂದಿದ್ದರು. ಗೋವಾ ಜನತೆಯು ಕೂಡ ಮನೋಹರ್ ಪರಿಕ್ಕರ್ ಮೇಲೆ ಅಪಾರವಾದ ನಂಬಿಕೆಯನ್ನು ಇಟ್ಟಿದ್ದರು. ಅದನ್ನು ಉಳಿಸಿಕೊಳ್ಳುವಂತೆ ಮನೋಹರ್ ಪರಿಕ್ಕರ್ ಅವರು ಕೆಲಸ ಕಾರ್ಯಗಳನ್ನು ಮಾಡುತ್ತಿದ್ದರು.
Comments