ಬಂಧನದ ಭೀತಿಯಲ್ಲಿರುವ ಬಿಜೆಪಿಯ ಪ್ರಭಾವಿ ಶಾಸಕ..!!
ಚುನಾವಣೆ ದಿನಾಂಕ ನಿಗಧಿಯಾದ ಹಿನ್ನೆಲೆಯಲ್ಲಿ ಈಗಾಗಲೇ ಎಲ್ಲೆಡೆ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿಂದೆ ಬಿಜೆಪಿಯ ಮಾಜಿ ಸಚಿವ ರೇಣುಕಾಚಾರ್ಯ ಚುನಾವಣೆ ನೀತಿಯನ್ನು ಉಲ್ಲಂಘನೆ ಮಾಡಿದ್ದರು. ಈ ಹಿನ್ನಲೆಯಲ್ಲಿ ಇದೀಗ ರೇಣುಕಾಚಾರ್ಯ ಗೆ ಬಂಧನದ ಭೀತಿ ಎದುರಾಗಿದೆ. ಚುನಾವಣೆ ಮಾದರಿ ನೀತಿ ಸಂಹಿಂತೆ ಉಲ್ಲಂಘನೆ ಆರೋಪ ಸಂಬಂಧ ವಿಚಾರಣೆಗೆ ಹಲವು ಬಾರಿ ಗೈರು ಹಾಜರಿ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದೆ.
ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ವೇಳೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರೂ ಕೂಡ ಮಾಜಿ ಸಚಿವ ರೇಣುಕಾಚಾರ್ಯ ಗೈರು ಹಾಜರಾಗುತ್ತಿದ್ದರು ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ನ್ಯಾ. ರಾಮಚಂದ್ರ ಡಿ. ಹುದ್ದರ್ ಎರಡನೇ ಬಾರಿ ಜಾಮೀನು ರಹಿತ ವಾರೆಂಟ್ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಇದೀಗ ರೇಣುಕಾಚಾರ್ಯ ಗೆ ಬಂಧನದ ಬೀತಿ ಎದುರಾಗಿದೆ.
Comments