ಸ್ಯಾಂಡಲ್ ವುಡ್ ನ ದಿಗ್ಗಜರಿಗೆ ಖಡಕ್ ವಾರ್ನಿಂಗ್ ಕೊಟ್ಟ ಜೆಡಿಎಸ್ ಶಾಸಕ..!!?
ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಾಕಷ್ಟು ಗೊಂದಲಗಳು ಸೃಷ್ಟಿಯಾಗಿವೆ.. ಅದರಲ್ಲೂ ಮಂಡ್ಯ ಲೋಕಸಭಾ ಅಖಾಡದ ಕಾವು ಮಾತ್ರ ತಣ್ಣಗಾಗುವಂತೆ ಕಾಣುತ್ತಿಲ್ಲ..ಈಗಾಗಲೇ ಲೋಕಸಭೆ ಚುನಾವಣೆಗೆ ಮಂಡ್ಯ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿರುವ ಸುಮಲತಾ ಅಂಬರೀಶ್ ಬೆಂಬಲಕ್ಕೆ ನಿಂತಿರುವ ನಟರಾದ ದರ್ಶನ್ ಮತ್ತು ಯಶ್ ಗೆ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ನಮ್ಮ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಬಗ್ಗೆ ಮಾತನಾಡಿದರೆ ತಕ್ಕ ಪಾಠ ಕಲಿಸಬೇಕಾಗುತ್ತದೆ. ನಿಮಗೂ ರಾಜಕಾರಣಕ್ಕೂ ಸಂಬಂಧವಿಲ್ಲ. ಸುಮ್ಮನೆ ಶೂಟಿಂಗ್ ಮಾಡಿ. ಇಲ್ಲದಿದ್ದರೆ ನಿಮ್ಮ ಆಸ್ತಿ ಅಂತಸ್ತಿನ ಬಗ್ಗೆ ತನಿಖೆ ಆರಂಭವಾಗಬಹುದು. ಸರಕಾರ ನಮ್ಮದಿದೆ, ಗೌರವದಿಂದ ಮನೆಯಲ್ಲಿರಿ' ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಂಬರೀಷ್ ಅಣ್ಣನ ಬಗ್ಗೆ ನಮಗೆ ಅಪಾರ ಗೌರವವಿದೆ. ಸಿನಿಮಾದವರು ಹುಟ್ಟು ಹಾಕುತ್ತಿರುವುದು ಗೊಂದಲಗಳು ಆ ಸಿನಿಮಾ ಇಂಡಸ್ಟ್ರಿ ಮೇಲೆ ಪರಿಣಾಮ ಬೀರಲಿದೆ. ಸಿನಿಮಾ ಬಗ್ಗೆ ಮಾತನಾಡಲಿ, ಆದರೆ, ನಮ್ಮ ರಾಜಕಾರಣದಲ್ಲಿ ಮಧ್ಯ ಪ್ರವೇಶಿಸುವುದು ಬೇಡ' ಎಂದು ವಾಗ್ಧಾಳಿ ನಡೆಸಿದ್ದಾರೆ. ಒಟ್ಟಾರೆಯಾಗಿ ಚಲನಚಿತ್ರಕ್ಕೂ ರಾಜಕಾರಣಕ್ಕೂ ಸಂಬಂಧವಿಲ್ಲ.. ನಿಮ್ಮ ಪಾಡಿಗೆ ನೀವಿರಿ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.
Comments