ಅಂಬಿ ಅಭಿಮಾನಿಗಳಿಂದ ಕುಮಾರಸ್ವಾಮಿಯವರಿಗೆ ಖಡಕ್ ವಾರ್ನಿಂಗ್..!! ಯಾಕೆ ಗೊತ್ತಾ..?

ಇವತ್ತು ಡಾ.ರಾಜ್ ಕುಮಾರ್ ಅವರ ಹುಟ್ಟುಹಬ್ಬ… ಡಾ. ರಾಜ್‍ಕುಮಾರ್ ಅವರ 90ನೇ ಹುಟ್ಟುಹಬ್ಬ ಇದಾಗಿದ್ದು, , ಮನೆಯವರು ಹಾಗೂ ಅಭಿಮಾನಿಗಳು ಅಣ್ಣಾವ್ರ ಹುಟ್ಟುಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಸರ್ಕಾರದಿಂದ ಕೂಡ ಡಾ. ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದು, ಇದೇ ಹಿನ್ನಲೆಯಲ್ಲಿ ಅಂಬರೀಶ್ ಹಾಗೂ ವಿಷ್ಣು ಅಭಿಮಾನಿಗಳು ಸಿಎಂ ಎಚ್ ಡಿ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.ರಾಜ್ಯದ ಎಲ್ಲಾ ಕಡೆಗಳಲ್ಲಿಯೂ ಸಡಗರ ಸಂಭ್ರಮದಿಂದ ತಮ್ಮ ನೆಚ್ಚಿನ ನಟ ಹಾಗೂ ಅಭಿಮಾನಿಗಳು ಆರಾಧ್ಯ ದೈವವೆಂದು ಪೂಜಿಸುವ ರಾಜ್‍ಕುಮಾರ್ ಅವರ 90ನೇ ವರ್ಷದ ಜಯಂತಿಯನ್ನು ಆಚರಿಸಲಾಗುತ್ತಿದೆ. ನೇತ್ರದಾನ, ಅನ್ನದಾನ, ರಕ್ತದಾನ ಮಾಡುತ್ತ ತುಂಬಾ ವಿಶೇಷವಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡುತ್ತಿದ್ದಾರೆ.
ಡಾ. ರಾಜ್‍ಕುಮಾರ್ ಹುಟ್ಟುಹಬ್ಬವನ್ನು ಸರ್ಕಾರದಿಂದ ಆಚರಣೆ ಮಾಡುವ ಬಗ್ಗೆ ಸಿಎಂ ಕುಮಾರಸ್ವಾಮಿ ನಿರ್ಧಾರದ ಹಿನ್ನಲೆಯಲ್ಲಿಯೇ ವಿಷ್ಣು ಹಾಗೂ ಅಂಬಿ ಅಭಿಮಾನಿಗಳು ಸಿಎಂ ಕುಮಾರಸ್ವಾಮಿಯವರಿಗೆ ಪ್ರಶ್ನೆಗಳ ಸುರಿಮಳೆಯನ್ನೆ ಸುರಿಸಿದ್ದಾರೆ.. ಡಾ ರಾಜ್ ಹುಟ್ಟುಹಬ್ಬ ಮಾಡುತ್ತಿದ್ದೀರಲ್ಲ ಅದರಂತೆ ಕನ್ನಡ ಚಿತ್ರರಂಗದ ದಿಗ್ಗಜರಾಗಿರುವ ಡಾ ವಿಷ್ಣು, ಅಂಬಿ ಹುಟ್ಟುಹಬ್ಬವನ್ನು ಆಚರಿಸುತ್ತೀರಾ ಎಂದು ಸಿಎಂ ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ್ದಾರೆ.. ಕನ್ನಡ ಚಿತ್ರರಂಗದ ದಿಗ್ಗಜರ ಸಾಲಲ್ಲಿ ಡಾ. ವಿಷ್ಣುವರ್ಧನ್, ಅಂಬರೀಶ್ ಇದ್ದಾರೆ. ಅವರ ಹುಟ್ಟುಹಬ್ಬವನ್ನು ಆಚರಿಸದೇ ತಾರತಮ್ಯ ಮಾಡೋದು ಸರಿಯಲ್ಲ. ಚಿತ್ರರಂಗದ ದಿಗ್ಗಜರ ವಿಚಾರದಲ್ಲಿ ತಾರತಮ್ಯ ಮಾಡಬೇಡಿ. ಒಬ್ಬರ ಹುಟ್ಟುಹಬ್ಬವನ್ನು ಆಚರಿಸಿ, ಇನ್ನೊಬ್ಬರನ್ನು ನಿರ್ಲಕ್ಷ್ಯ ಮಾಡಬೇಡಿ ಎಂದು ಸಿಎಂಗೆ ಅಭಿಮಾನಿಗಳು ಎಚ್ಚರಿಕೆಯನ್ನು ನೀಡಿದ್ದಾರೆ.. ಡಾ. ರಾಜ್ ಹುಟ್ಟುಹಬ್ಬವನ್ನು ರಾಜಕೀಯ ದಾಳವನ್ನಾಗಿ ಆಚರಿಸಬೇಡಿ ಎಂದು ಮನವಿ ಮಾಡಿದ್ದಾರೆ. ಒಟ್ಟಿನಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಒಬ್ಬರಿಗೆ ಒಂದು ಮಾಡುವುದು ಸರಿಯಲ್ಲ ಎಂದಿದ್ದಾರೆ… ಎಲ್ಲರನ್ನೂ ಸಮಾನವಾಗಿ ಕಾಣಬೇಕು… ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ ಮಾಡುವುದು ಸರಿಯಲ್ಲ ಎಂದು ಅಭಿಮಾನಿಗಳು ಕುಮಾರಸ್ವಾಮಿಯವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.
Comments