ಪರೋಕ್ಷವಾಗಿ ಸರ್ಕಾರದ ಭವಿಷ್ಯ ನುಡಿದ ಕೋಡಿ ಮಠದ ಶ್ರೀ..!!

ಲೋಕ ಸಮರ ಒಂದು ಮಟ್ಟಿಗೆ ಮುಕ್ತಾಯವಾಗಿದೆ… ಫಲಿತಾಂಶವಷ್ಟೆ ಬಾಕಿ ಇರುವುದರಿಂದ ಅಭ್ಯರ್ಥಿಗಳು ಇನ್ನೂ ಗೊಂದಲದಲ್ಲಿ ಇದ್ದಾರೆ. ಲೋಕಸಭಾ ಚುನಾವಣಾ ನಂತರ ರಾಜ್ಯದಲ್ಲಿ ರಾಜಕೀಯದಲ್ಲಿ ಬದಲಾವಣೆ ಆಗಬಹುದೇನೋ ಎಂದು ಎಲ್ಲರೂ ಕೂಡ ಕಾಯುತ್ತಿದ್ದಾರೆ. ಒಂದು ಕಡೆ ಬಿಜೆಪಿಯು ಮೈತ್ರಿ ಸರ್ಕಾರವನ್ನು ಉರುಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಮತ್ತೊಂದು ಕಡೆ ಸರ್ಕಾರವನ್ನು ಕಾಪಾಡಿಕೊಳ್ಳಲು ದೋಸ್ತಿಗಳು ಸಾಕಷ್ಟು ಪ್ರಯತ್ನ ಮಾಡುತ್ತಿದೆ.. ಇದೇ ವೇಳೆ ಕೋಡಿ ಮಠದ ಸ್ವಾಮೀಜಿ ಯಾವುದೇ ಭವಿಷ್ಯ ಹೇಳುವುದಿಲ್ಲ ಎಂದಿದ್ದರು. ಆದರೆ ಇದೀಗ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದ ಬಗ್ಗೆ ಈಗಾಗಲೇ ಹಲವು ಬಾರಿ ಮಾತನಾಡಿದ್ದೇನೆ. ಸದ್ಯ ರಾಜಕೀಯ ವಿಚಾರವಾಗಿ ಏನು ಮಾತನಾಡುವುದಿಲ್ಲ ಎಂದಿದ್ದಾರೆ. ಲೋಕಸಭಾ ಚುನಾವಣೆ ನಿಟ್ಟಿನಲ್ಲಿ ಚುನಾವಣಾ ಆಯೋಗ ನನಗೆ ನೋಟಿಸ್ ಕೊಟ್ಟಿದೆ. ಮೇ 23ರವರೆಗೆ ಯಾವುದೇ ವಿಚಾರದ ಬಗ್ಗೆಯೂ ಮಾತನಾಡುವುದಿಲ್ಲ ಎಂದು ಬರೆದುಕೊಟ್ಟಿರುವೆ. ಆದ್ದರಿಂದ ಏನು ಹೇಳುವುದಿಲ್ಲ ಎಂದಿದ್ದಾರೆ. ಆದರೆ ರಾಜಕೀಯದಲ್ಲಿ ನೀವು ಅಂದುಕೊಂಡಂತೆ ಬದಲಾವಣೆ ಆಗುತ್ತದೆ ಎಂದು ಪರೋಕ್ಷವಾಗಿ ಸರ್ಕಾರದ ಭವಿಷ್ಯವನ್ನು ಹೇಳಿದರು. ರಾಜಕೀಯದಲ್ಲಿ ನೀವು ಅಂದುಕೊಂಡಂತೆ ಬದಲಾವಣೆಯಾಗುತ್ತದೆ ಎಂಬ ಮಾತಿನ ಬಗ್ಗೆ ರಾಜಕೀಯ ಗಣ್ಯರು ತುಂಬಾ ತಲೆ ಕೆಡಿಸಿಕೊಂಡಿದ್ದಾರೆ. ಒಟ್ಟಾರೆಯಾಗಿ ದೋಸ್ತಿ ಸರ್ಕಾರ 5 ವರ್ಷ ಆಡಳಿತ ನಡೆಸುತ್ತದೆಯೋ ಅಥವಾ ಸಾಕು ಎಂದು ಕೈ ತೊಳೆದುಕೊಳ್ಳುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ..
Comments