ಎಸ್ ಎಸ್ ಎಲ್ ಸಿ ಫಲಿತಾಂಶ ಮೇ 2 ಕ್ಕೆ ಅಲ್ಲ…!! ಬದಲಿಗೆ ಇವತ್ತೆ..!!
ಹತ್ತನೇ ತರಗತಿ ವಿದ್ಯಾರ್ಥಿಗಳ ಭವಿಷ್ಯ ಮೇ 2 ರಂದು ನಿರ್ಧಾರವಾಗಲಿದೆ.ಮೇ 2 ರಂದು ಎಸ್ಎಸ್ಎಲ್’ಸಿ ಪರೀಕ್ಷೆ ಫಲಿತಾಂಶ ಹೊರ ಬೀಳಲಿದೆ. ಮೇ 3ರಂದು ಆಯಾಯ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಅವರು ಸೋಮವಾರ ತಿಳಿಸಿದ್ದರು, ಆದರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶವನ್ನು ಇಂದೇ ಪ್ರಕಟ ಮಾಡಲಾಗುವುದು ಅಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್ ಆರ್ ಉಮಾಶಂಕರ್ ಇದೀಗ ಸ್ಪಷ್ಟ ಪಡಿಸಿದ್ದಾರೆ.
ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾಗಲಿದೆ. ಸುದ್ದಿಗೋಷ್ಠಿಯ ಬಳಿಕ ವಿದ್ಯಾರ್ಥಿಗಳು ಇಲಾಖೆಯ ವೆಬ್ ಸೈಟ್ ನಲ್ಲಿ ಮಾಹಿತಿ ಪಡೆಯಬಹುದು. ನಾಳೆ ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮಾರ್ಚ್ 22 ರಿಂದ ಏಪ್ರಿಲ್ 4 ರ ವರೆಗೆ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 2,847 ಕೇಂದ್ರಗಳಲ್ಲಿ ಒಟ್ಟು 8.41 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ಈ ವೆಬ್ ಸೈಟ್ ನಲ್ಲಿ ಲಭ್ಯ; www.karresults.nic.in, www.kaceb.kar.nic.in ಉತ್ತೀರ್ಣರಾದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶದ ಎಸ್ಸೆಎಂಎಸ್ ಪೋಷಕರಿಗೆ ಕಳುಹಿಸಲಾಗುವುದು ಎಂದು ವಿ.ಸುಮಂಗಲಾ ತಿಳಿಸಿದ್ದಾರೆ. ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಎಲ್ಲಾ ಮಕ್ಕಳಿಗೂ ಆಲ್ ದಿ ಬೆಸ್ಟ್..
Comments