ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡ್ತಿದ್ದೀರಾ..!! ಹಾಗಾದ್ರೆ ಇದನ್ನೊಮ್ಮೆ ಓದಿ

30 May 2019 3:33 PM | General
423 Report

ಇತ್ತಿಚಿಗೆ ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ… ಕೆಲವೊಬ್ಬರು ಒಳ್ಳೆಯ ಕೆಲಸಕ್ಕೆ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುತ್ತಾರೆ.. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡುತ್ತಾರೆ…ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಜೆಡಿಎಸ್ ಮುಖಂಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಪ್ರಕಟಿಸಿದ ಆರೋಪದಡಿ `ಟ್ರೋಲ್ ಮಗ' ಫೇಸ್ ಬುಕ್ ಪುಟದ ಅಡ್ಮಿನ್ ವಿರುದ್ಧ ಶ್ರೀರಾಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟ್ರೋಲ್ ಮಗ ಫೇಸ್ ಬುಕ್ ಫೇಜ್ ಅಡ್ಮಿನ್ ವಿರುದ್ದ ಜೆಡಿಎಸ್ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿಯಾದ ಎಸ್.ಪಿ. ಪ್ರದೀಪ್ ಕುಮಾರ್ ದೂರು ನೀಡಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸುವ ಪೋಸ್ಟ್ ಗಳನ್ನು ಟ್ರೋಲ್ ಮಗಾ ಪುಟದಲ್ಲಿ ಪ್ರಕಟಿಸಿ ತೇಜೋವಧೆಗೆ ಪ್ರಯತ್ನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇನ್ನು ಟ್ರೋಲ್ ಮಗಾ ಅಡ್ಮಿನ್ ಜಯಕಾಂತ್ ಎಂದು ದೂರುದಾರರು ತಿಳಿಸಿದ್ದಾರೆ..  ಆದರೆ ಜಯಕಾಂತ್ ಅವರನ್ನು ವಿಚಾರಣೆಗೆ ಒಳಪಡಿಸಿದಾಗ, ಅವರು ಅಡ್ಮಿನ್ ಅಲ್ಲ ಎಂದು  ತಿಳಿಯಿತು ಎಂದು ಪೊಲೀಸರು ತಿಳಿಸಿದ್ದಾರೆ.  ಪುಟದ ಅಡ್ಮಿನ್ ಯಾರ ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಆತನಿಗಾಗಿ ಹುಡುಕಾಟ ನಡೆಸುತ್ತಿದ್ದು, ಸೈಬರ್ ಕ್ರೈಂ ಪೊಲೀಸರ ನೆರವು ಪಡೆಯುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ. ಒಟ್ಟಾರೆಯಾಗಿ ಇನ್ನು ಮುಂದೆ ಸೋಷಿಯಲ್ ಮಿಡಿಯಾ ಬಳಸುವಾಗ ತುಂಬಾ ಎಚ್ಚರಿಕೆಯಿಂದ ಬಳಸಬೇಕು.. ಟ್ರೋಲ್ ಮಾಡುವ ಮುನ್ನಾ ಎಚ್ಚರಿಕೆಯಿಂದ ಇರಬೇಕು…

Edited By

Manjula M

Reported By

Manjula M

Comments