ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ..! ಇವರ ಟಾರ್ಗೆಟ್ ಯಾರ್ ಗೊತ್ತಾ..!
ಸ್ಯಾಂಡಲ್ ವುಡ್ ನಲ್ಲಿ ವಿಭಿನ್ನ ಕಥಾಹಂದರದಲ್ಲಿ ಮೂಡಿಬಂದು ಗೆದ್ದ ಸಿನಿಮಾ ಎಂದರೆ ಅದು ಲೂಸಿಯಾ.. ಹೆಸರೇ ಒಂದು ರೀತಿಯಾಗಿ ವಿಭಿನ್ನವಾಗಿದೆ.. ಲೂಸಿಯಾ ಸಿನಿಮಾ ಎಲ್ಲರ ಗಮನ ಸೆಳೆದಿದ್ದು ಮಾತ್ರ ನಾಯಕನಟ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ.. ಆದರೆ ಇದೀಗ ಆ ರೀತಿಯ ಮಾತ್ರೆಯೇ ಬೆಂಗಳೂರಿಗೆ ಬಂದಿದೆ ಎನ್ನಲಾಗುತ್ತಿದೆ.. ಟೆಕ್ಕಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡುತ್ತಾ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ.
ಯಾವುದೇ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿಯನ್ನು ಹೊಂದಿದೆ ಎನ್ನಲಾಗುತ್ತಿದೆ. ವಿದೇಶದಿಂದ ಬರುವಂತಹ ಈ ಮಾತ್ರೆಗಳ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ. ಇದೀಗ ನಗರದಲ್ಲಿ ಈ ಮಾತ್ರೆಗಳು ಲಭ್ಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಲೂಸಿಯಾ ಅಲಿಯಾಸ್ ಮೆಥಾಂಪ್ಟಮೈನ್ ಮಾತ್ರೆ ಮಾರಾಟದ ಆರೋಪದ ಮೇರೆಗೆ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು, ಈ ಮೂಲಕ ಮೆಥಾಂಪ್ಟಮೈನ್ ಟ್ಯಾಬ್ಲೆಟ್ ಮಾರಾಟ ಜಾಲ ಬೆಳಕಿಗೆ ಬಂದಿದೆ. ಒಟ್ಟಾರೆಯಾಗಿ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಈ ರೀತಿಯ ದಂದೆಯನ್ನು ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ವಿದ್ಯಾರ್ಥಿಗಳ ಜೀವನಕ್ಕೆ ಇದು ಮಾರಕವಾಗುವುದರಲ್ಲಿ ಯಾವುದೇ ಅನುಮಾನವಿಲ್ಲ..
Comments