ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್..!! ಏನ್ ಗೊತ್ತಾ..?
ಸದ್ಯ ದೇಶದಲ್ಲಿ ಇರುವ ಸಮಸ್ಯೆಗಳಲ್ಲಿ ನಿರುದ್ಯೋಗ ಕೂಡ ಒಂದು.. ನಿರುದ್ಯೋಗದ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.. ಈ ಸಮಸ್ಯೆಯನ್ನು ನಿವಾರಿಸಲು ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದರು.. ಆದರೂ ನಿರುದ್ಯೋಗ ಸಮಸ್ಯೆ ಕಡಿಮೆಯಾಗಿಲ್ಲ… ಅದಕ್ಕಾಗಿ ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇದು ಕೂಡ ಒಂದಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸ್ಕಿಲ್ ಇಂಡಿಯಾ ಕಾರ್ಯಕ್ರಮದಲ್ಲಿ ಇದೀಗ ಕೆಲವೊಂದಿಷ್ಟು ಬದಲಾವಣೆಗಳನ್ನು ಮಾಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ದೊಡ್ಡ ಕಂಪನಿಗಳ ಜೊತೆ ಅಸಂಘಟಿತ ಹಾಗೂ ಸಣ್ಣ ಸಂಸ್ಥೆಗಳ ಜೊತೆಯೂ ಒಪ್ಪಂದ ಮಾಡಿಕೊಳ್ಳಲು ನಿರ್ಧಾರ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.. ಈ ವಿಷಯದ ಬಗ್ಗೆ ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಕಾರ್ಯದರ್ಶಿಯಾದ ಡಾ.ಕೆ.ಪಿ. ಕೃಷ್ಣನ್ ಮಾಹಿತಿ ನೀಡಿದ್ದಾರೆ.. 4-6 ಸಾವಿರ ಜನರಿಗೆ ಉದ್ಯೋಗ ನೀಡುವ ಉದ್ಯೋಗದ ಮೇಲೆ ಗಮನವನ್ನು ಹರಿಸಲಾಗಿದೆ. ಅದಕ್ಕೆ ಅನುಗುಣವಾಗಿ ಗ್ಯಾರೇಜ್, ರೆಸ್ಟೋರೆಂಟ್‌ನಂತಹ ಉದ್ಯಮಕ್ಕೆ ಬೇಕಾದಂತಹ ತರಬೇತಿಯ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ್ಧಾರೆ. ಈ ನಿಟ್ಟಿನಲಾದರೂ ನಿರುದ್ಯೋಗ ಸಮಸ್ಯೆಯು ಕಡಿಮೆಯಾಗಬಹುದು ಎಂಬುದು ಡಾ. ಕೆಪಿ ಕೃಷ್ಣನ್ ಅವರ ಅಭಿಪ್ರಾಯವಾಗಿದೆ.. ಇದರಿಂದ ಸುಲಭಾವಾಗಿ ನಿರುದ್ಯೋಗಿಗಳಿಗೆ ಕೆಲಸ ಸಿಗುತ್ತದೆ.
Comments