ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ ಜೆಡಿಎಸ್ ನಾಯಕರು..!!
ಇದೀಗ ಸದ್ಯ ಎಲ್ಲರ ಬಾಯಲ್ಲೂ ಕೂಡ ಉತ್ತರ ಕರ್ನಾಟಕದ ನೆರೆಯ ಬಗ್ಗೆಯೇ ಮಾತು.. ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಸದ್ಯ ಸಹಾಯ ಮಾಡುವ ನಿಟ್ಟಿನಲ್ಲಿ ಎಲ್ಲರು ಇದ್ದಾರೆ.. ಇದರ ನಡುವೆಯೂ ಕೂಡ ರಾಜಕೀಯ ಪಕ್ಷಗಳು ತಮ್ಮ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುತ್ತಿವೆ. ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಜನರ ಜೀವನ ಅಸ್ತವ್ಯಸ್ತಗೊಂಡಿದೆ.,ಆದರೆ ರಾಜ್ಯ ಸರ್ಕಾರ ಮಾತ್ರ ರಕ್ಷಣೆಗೆ ಬಾರದೇ ಇರುವುದು ದುರಾದೃಷ್ಟಕರ ಸಂಗತಿ ಎಂದು ಜೆಡಿಎಸ್ ಟ್ವೀಟರ್ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದೆ.
ದೋಸ್ತಿಗಳಿಗೆ ಕೈ ಕೊಟ್ಟು ಅತೃಪ್ತ ಶಾಸಕರು ದೋಸ್ತಿಗಳ ಪತನಕ್ಕೆ ಕಾರಣರಾದರು.. ಇದೇ ಹಿನ್ನಲೆಯಲ್ಲಿ ದೋಸ್ತಿಗಳು ಬಿಜೆಪಿಯವರ ವಿರುದ್ದ ಆಕೋಶ್ರಗೊಂಡರು. ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ..ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಜೆಡಿಎಸ್ ನಾಯಕರು ವಾಗ್ದಾಳಿ ನಡೆಸಿದ್ದಾರೆ..
Comments