ನಿಮ್ಮ ಬಳಿ BPL ಕಾರ್ಡ್ ಇದೆಯಾ..? ಹಾಗಾದ್ರೆ ಇದನ್ನೊಮ್ಮೆ ಓದಿ..!

ಕೆಲ ದಿನಗಳ ಹಿಂದಷ್ಟೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಅನ್ನಭಾಗ್ಯ ಯೋಜನೆಗೆ ಬಿಎಸ್ ವೈ ಸರ್ಕಾರ ಕತ್ತರಿಯಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿದ್ದವು.. ಇದೀಗ ಅನ್ನಭಾಗ್ಯ ಪಡಿತರದಾರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸುವ ಸಂಬಂಧ ಆಗಸ್ಟ್ 14 ರಂದೇ ಸಿಎಂ ನಿರ್ದೇಶನ ಕೊಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ..
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕಿಸಾನ್ ಸಮ್ಮಾನ್ ಯೋಜನೆಗೆ ಹಣ ಹೊಂದಿಸಲು ಅನ್ನ ಭಾಗ್ಯದ ಅನುದಾನ ಕಡಿತಗೊಳಿಸಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದರು.. . ಅದಷ್ಟೆ ಅಲ್ಲದೆ ಅದರ ಜೊತೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ, ಅನ್ನಭಾಗ್ಯದಂತಹ ಯೋಜನೆ ಕಡಿತಗೊಳಿಸಿದರೆ ಜನರು ದಂಗೆಯೇಳುತ್ತಾರೆಂದು ಎಚ್ಚರಿಕೆ ನೀಡಿದ್ದರು. ಇದೀಗ ಆಂತರಿಕವಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯಿಂದ ಲಿಖಿತ ಸೂಚನೆಯನ್ನೂ ಕೊಡಲಾಗಿದೆ. ಜೊತೆಗೆ ಅದೇ ಮುಂದಿನ 3 ತಿಂಗಳಿಗೆ ಅನ್ನಭಾಗ್ಯ ಅಕ್ಕಿ ಖರೀದಿಸಲು 240 ಕೋಟಿ ರೂ. ಒದಗಿಸಲಾಗಿದೆ. ರಾಜ್ಯಸರ್ಕಾರದಿಂದಲೇ ಅಕ್ಕಿ ಖರೀದಿಸಲಿ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.
Comments