`BPL' ಕುಟುಂಬದರಿಗೆ ರಾಜ್ಯ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್..!! ಏನ್ ಗೊತ್ತಾ..?
ಅಂದಹಾಗೆ ರಾಜ್ಯ ಸರ್ಕಾರವು ಆಗಿಂದಾಗೆ ಬಿಪಿಎಲ್ ಕಾರ್ಡುದಾರರಿಗೆ ಸಿಹಿಸುದ್ದಿ ನೀಡುತ್ತಲೇ ಇರುತ್ತದೆ… ಸಾಕಷ್ಟು ಯೋಜನೆಗಳನ್ನ ಬಿಪಿಎಲ್ ಕಾರ್ಡುದಾರರಿಗೆ ರಾಜ್ಯ ಸರ್ಕಾರವು ನೀಡಿದೆ. ಇದೀಗ ತುಂಬಾ ದುಬಾರಿಯಾಗಿದ್ದ ಅಂಗಾಂಗ ಕಸಿ ಚಿಕಿತ್ಸೆಗೆ ರಾಜ್ಯ ಸರ್ಕಾರ ನೆರವು ನೀಡಲಿದೆ. ರಾಜ್ಯ ಅಂಗಾಂಗ ಕಸಿ ಯೋಜನೆಯಡಿ ಅಂಗಾಂಗ ಕಸಿ ಚಿಕಿತ್ಸೆಯ ಸಂಪೂರ್ಣ ವೆಚ್ಚ ಮತ್ತು ಔಷಧ ವೆಚ್ಚವನ್ನು ರಾಜ್ಯ ಸರ್ಕಾರವೇ ನೀಡಲಿದೆ. ಇದರಿಂದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಅನುಕೂಲವಾಗಲಿದೆ.
ರಾಜ್ಯದ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳು ಮಾತ್ರ ಅಂಗಾಂಗ ಕಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. . ಈ ಯೋಜನೆಯಲ್ಲಿ ಅಗತ್ಯ ಇರುವ ರೋಗಿಗಳು ಹೃದಯ, ಕಿಡ್ನಿ ಮತ್ತು ಲಿವರ್ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬಹುದಾಗಿದೆ. ಸರ್ಕಾರ ಗುರುತಿಸಿರುವ ಆಸ್ಪತ್ರೆಗಳಲ್ಲೇ ಚಿಕಿತ್ಸೆ ಪಡೆಯಬೇಕು. ಕಿಡ್ನಿ ಕಸಿಗಾಗಿ ಬೆಂಗಳೂರಿನ ವಿಕ್ಟೊರಿಯಾ ಆಸ್ಪತ್ರೆಯ ಆವರಣದಲ್ಲಿರುವ ನೆಪ್ರೊ ಯುರಾಲಜಿ ಸಂಸ್ಥೆ, ಲಿವರ್ ಕಸಿಗೆ ಪ್ರಧಾನಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಆಸ್ಪತ್ರೆ ಹಾಗೂ ಹೃದಯ ಕಸಿಗೆ ಜಯದೇವ ಹೃದ್ರೋಗ ಮತ್ತು ಸಂಶೋಧನಾ ಸಂಸ್ಥೆ ಅಥವಾ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ಆದರೆ ಜೀವಂತ ವ್ಯಕ್ತಿಯಿಂದ ಅಂಗಾಂಗ ದಾನ ಪಡೆಯುವವರು ಸರ್ಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯಬೇಕು. ಕಳೆದ ಜನವರಿಯಲ್ಲಿ ಯೋಜನೆ ಆರಂಭವಾಗಿದೆ. ಇತ್ತೀಚೆಗೆ ಅತಿಮುಖ್ಯ ಅಂಗಾಂಗಗಳಾದ ಹೃದಯ, ಯಕೃತ್, ಮೆದೋಜೀರಕ ಗ್ರಂಥಿ, ಮೂತ್ರಪಿಂಡದ ಕಾಯಿಲೆಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಕೊನೆ ಹಂತದಲ್ಲಿ ರೋಗಿ ಉಳಿಸಲು ಅಂಗಾಂಗ ಕಸಿ ಮಾಡಲಾಗುತ್ತದೆ. ಒಟ್ಟಿನಲ್ಲಿ ರಾಜ್ಯ ಸರ್ಕಾರದ ಈ ಮಹತ್ತರ ನಿರ್ಧಾರದಿಂದ ಬಡವ ಬಗ್ಗರಿಗೆ ಅನೇಕರಿಗೆ ಸಹಾಯವಾಗುವುದಂತೂ ಸುಳ್ಳಲ್ಲ.. ಬಿಪಿಎಲ್ ಕಾರ್ಡುದಾರರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ರಾಜ್ಯ ಸರ್ಕಾರವು ತಿಳಿಸಿದೆ.
Comments