ಹಿರಿಯ ರಾಜಕಾರಣಿ ಮಾಜಿ ಶಾಸಕ ಎ.ಕೆ ಸುಬ್ಬಯ್ಯ ವಿಧಿವಶ
ಹಿರಿಯ ರಾಜಕಾರಣಿ, ಸಾಮಾಜಿಕ ಚಿಂತಕ ಮತ್ತು ಹೋರಾಟಗಾರರಾದ ಎ.ಕೆ.ಸುಬ್ಬಯ್ಯ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಮಧ್ಯಾಹ್ನ ನಿಧನರಾದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಎ.ಕೆ ಸುಬ್ಬಯ್ಯ ಅವರು ವಿಧಿವಶರಾಗಿದ್ದಾರೆ. ಇವರಿ ರಾಜ್ಯದ ಉಚ್ಚನ್ಯಾಯಾಲಯದಲ್ಲಿ ಅವರು ವಕೀಲರಾಗಿ ಪ್ರಸಿದ್ದಿ ಪಡೆದುಕೊಂಡಿದ್ದರು.
ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುಬ್ಬಯ್ಯ ಅವರಿಗೆ ಶಸ್ತ್ರಚಿಕಿತ್ಸೆ ಮತ್ತು ಇನ್ನಿತರ ಚಿಕಿತ್ಸೆಗಳನ್ನು ನೀಡಲಾಗಿತ್ತು. ಆದರೆ ಕಳೆದ1 ವರ್ಷದಿಂದ ಕಿಡ್ನಿ ತೊಂದರೆಯನ್ನು ಅನುಭವಿಸುತ್ತಿದ್ದು ಡಯಾಲಿಸಿಸ್ ನಿರಂತರವಾಗಿ ನಡೆಯುತ್ತಲಿತ್ತು. ಅವರು ವಾರಕ್ಕೆ ಮೂರು ದಿನ ಡಯಾಲಿಸಿಸ್‌ಗೆ ಒಳಗಾಗುತ್ತಿದ್ದರು ಎನ್ನಲಾಗುತ್ತಿದೆ. ಚಿಕಿತ್ಸೆ ಫಲಕಾರಿಯಾಗಿದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
Comments