ಕೊಡಗು ಜಿಲ್ಲೆಗೆ ಸಿಎಂ ಯಡಿಯೂರಪ್ಪ ಕೊಟ್ರು ಸಿಹಿಸುದ್ದಿ..!!
ಇತ್ತಿಚಿಗೆ ಬಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಜನತೆ ತತ್ತರಿಸಿ ಹೋಗಿತ್ತು.. ಇದೀಗ ಪ್ರಕೃತಿ ವಿಕೋಪಕ್ಕೆ ಸಿಲುಕಿದ ಕೊಡಗು ಜಿಲ್ಲೆಗೆ ಭರ್ಜರಿ ಸಿಹಿ ಸುದ್ದಿಯನ್ನು ಕೇಂದ್ರ ಸರ್ಕಾರ ನೀಡಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆಗೆ 536 ಕೋಟಿ ರೂ. ವಿಶೇಷ ಪ್ಯಾಕೇಜ್ ಸಿದ್ದಪಡಿಸಲಾಗಿದ್ದು, ಎರಡು ಮೂರು ದಿನಗಳಲ್ಲಿ 100 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಸಿಎಂ ಬಿಎಸ್ ವೈ ಘೋಷಣೆ ಮಾಡಿದ್ದಾರೆ..
ಕೊಡಗು ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಮಯದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ ನೆರೆ ಪರಿಹಾರಕ್ಕೆ ಪಿಡಿ ಖಾತೆಯಲ್ಲಿರುವ 60 ಲಕ್ಷ ರೂ. ವನ್ನು ಕೂಡ ಬಳಕೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೆ ಅಲ್ಲದೆ ಮಂಡ್ಯ ಮೈಸೂರು ಜಿಲ್ಲೆಗಳ ಜೀವನಾಡಿಯಾಗಿರುವ ಕನ್ನಂಬಾಡಿಕಟ್ಟೆ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪನವರು ಗುರುವಾರ ವಿಶೇಷ ಪೂಜೆಯನ್ಹು ಸಲ್ಲಿಸಿ ಬಾಗಿನ ಅರ್ಪಿಸಿದರು. ಈ ವೇಳೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ಶಾಸಕ ಎ.ಎಸ್. ರವೀಂದ್ರ ಶ್ರೀಕಂಠಯ್ಯ ಸಾಥ್ ನೀಡಿದರು. ಸಿಎಂ ಯಡಿಯೂರಪ್ಪನವರು ನೆರೆ ಸಂತ್ರಸ್ತರಿಗೆ ಪರಿಹಾರವನ್ನು ನೀಡಲು ಮುಂದಾಗಿದ್ದಾರೆ. ಇದರಿಂದ ರಾಜ್ಯದ ಮೇಲೆ ಜನತೆಗೆ ಮತ್ತಷ್ಟು ನಂಬಿಕೆ ಬರುತ್ತದೆ. ನೆರೆ ಸಂತ್ರಸ್ತರಿಗೆ ಬೇಕಾದ ಸೌಲಭ್ಯವನ್ನು ಒದಗಿಸಿಕೊಡುತ್ತಿದ್ದಾರೆ.
Comments