ನಿಮ್ಮಲ್ಲಿ ಬಿಪಿಎಲ್ ಕಾರ್ಡ್ ಇದೆಯಾ..? ಹಾಗಾದ್ರೆ ನೀವು ದಂಡ ಕಟ್ಟಬೇಕಾಗುತ್ತದೆ..!!
ಬಡ ಕುಟುಂಬಗಳಿಗೆ ಅನುಕೂಲವಾಗಲಿ ಅಂತಾ ಸರ್ಕಾರವು ಬಿಪಿಎಲ್ ಪಡಿತರ ಚೀಟಿಯನ್ನು ನೀಡಿದೆ… ಆದರೆ ಇದನ್ನು ತುಂಬಾ ಜನರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಹಣಕಾಸಿನ ವಿಚಾರದಲ್ಲಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ ಎಂಬುದು ತಿಳಿದುಬಂದಿದೆ.
ಇದೆ ಹಿನ್ನಲೆಯಲ್ಲಿ ಇದೀಗ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಎಚ್ಚರಿಕೆ ನೀಡಲಾಗಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ.ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವ ಸದೃಢರು 2019ರ ಸೆಪ್ಟೆಂಬರ್ 30ರ ಒಳಗೆ ಕಾರ್ಡ್ ವಾಪಸ್ ಮಾಡಬೇಕು. ಇಲ್ಲವೇ ಅಂತಹ ಅನರ್ಹರನ್ನು ಸರ್ಕಾರವೇ ಪತ್ತೆಮಾಡಿ ಅವರು ಎಷ್ಟು ದಿನದಿಂದ ಅಕ್ಕಿ ಪಡೆದಿದ್ದಾರೆ ಎಂಬುದನ್ನು ಲೆಕ್ಕಹಾಕಿ ಮುಕ್ತ ಮಾರುಕಟ್ಟೆ ದರ ಒಂದು ಕೆಜಿಗೆ 35 ರೂ. ನಂತೆ ದಂಡ ವಸೂಲಿ ಮಾಡಲಾಗುವುದು. ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಹೇಳಲಾಗಿದೆ. ಒಟ್ಟಿನಲ್ಲಿ ಬಡವರಿಗೆ ಅಂತ ಇರುವ ಈ ಯೋಜನೆಯನ್ನು ಸುಳ್ಳು ಹೇಳಿ ಜನ ಪಡೆದುಕೊಳ್ಳುತ್ತಿದ್ಧಾರೆ ಎಂಬುದು ಬೆಳಕಿಗೆ ಬಂದಿದ್ದು ಅವರ ವಿರುದ್ದ ಇದೀಗ ರಾಜ್ಯ ಸರ್ಕಾರ ಅದನ್ನು ತಡೆಹಿಡಿಯಲು ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.
Comments