ನಿಮ್ಮ ಬಳಿ ಬಿಪಿಎಲ್ ಕಾರ್ಡ್ ಇದ್ಯಾ..?ಹಾಗಾದ್ರೆ ಇದನ್ನೊಮ್ಮೆ ಓದಿ..!!
ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿರುವುದರಿಂದ ಬಡ ಕುಟುಂಬಗಳಿಗೆ ಉಪಯೋಗವಾಗುತ್ತಿದೆ.. ಆದರೆ ಬಡವರಿಗೆ ಕೊಡಬೇಕಾದ ಕಾರ್ಡ್ ಗಳು ಕೂಡ ದುರ್ಬಳಕೆ ಆಗಿವೆ ಎನ್ನಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳಿಗೆ ವಿತರಿಸುವ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದುಕೊಂಡ ಅನರ್ಹರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಬಿಪಿಎಲ್ ಪಡಿತರ ಚೀಟಿ ಪಡೆದ ಸಿರಿವಂತರು ಸುಳ್ಳು ಮಾಹಿತಿ ನೀಡಿ ಸರ್ಕಾರಕ್ಕೆ ವಂಚಿಸಿರುವುದು ಕಂಡು ಬಂದಿದೆ. ಹೀಗೆ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡವರಿಗೆ ಸೆಪ್ಟೆಂಬರ್ 30ರ ವರೆಗೆ ಕಾರ್ಡ್ ಹಿಂತಿಗಿಸಲು ಗಡುವು ನೀಡಲಾಗಿತ್ತು. ಆದರೆ ಇದೀಗ ಮತ್ತೊಮ್ಮೆ ಸರ್ಕಾರ ಅವಕಾಶ ನೀಡಲಾಗಿದೆ. ಅನರ್ಹರು ಪಡೆದುಕೊಂಡ ಬಿಪಿಎಲ್ ಕಾರ್ಡ್ ಗಳನ್ನು ಸಂಬಂಧಿಸಿದ ಕಚೇರಿಗೆ ಹಿಂತಿರುಗಿಸಬೇಕು. ಇಲ್ಲದಿದ್ದರೆ ಅಂತಹ ಕುಟುಂಬದವರನ್ನು ಪತ್ತೆ ಮಾಡಿ ನಿಯಮಾನುಸಾರ ಕ್ರಿಮಿನಲ್ ಕೇಸು ದಾಖಲಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಒಟ್ಟಾರೆಯಾಗಿ ಬಿಪಿಎಲ್ ಕಾರ್ಡ್ ಗಳನ್ನು ಪಡೆದಿರುವ ಅನರ್ಹರು ತಾವಾಗಿಯೇ ಕಾರ್ಡ್ ಗಳನ್ನು ವಾಪಸ್ ನೀಡಬೇಕು ಇಲ್ಲವಾದಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
Comments