ತಿಹಾರ್ ಜೈಲಿನಲ್ಲಿರುವ ಡಿಕೆಶಿಯನ್ನು ಭೇಟಿ ಮಾಡಿದ ಮಾಜಿ ಮುಖ್ಯಮಂತ್ರಿ..

ಕಳೆದ ಒಂದೂವರೆ ತಿಂಗಳಿನಿಂದ ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಕನಕಪುರದ ಬಂಡೆ ಡಿಕೆಶಿ ತಿಹಾರ್ ಜೈಲಿನಲ್ಲಿದ್ದಾರೆ.. ಕೇವಲ ಡಿಕೆಶಿ ಗೆ ಮಾತ್ರವಲ್ಲದೆ ಅವರ ಮನೆಯವರನ್ನು ಕೂಡ ಐಟಿ ಅಧಿಕಾರಿಗಳು ವಿಚಾರಣೆಯನ್ನು ಮಾಡುತ್ತಿದ್ದಾರೆ.. ಡಿಕೆಶಿ ಬಂಧನದ ಹಿನ್ನಲೆಯಲ್ಲಿ ಸಾಕಷ್ಟು ಪ್ರತಿಭಟನೆಗಳು ನಡೆದವು…
ಅಕ್ರಮ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಭೇಟಿಯಾಗಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ. ಸುರೇಶ್ ಜೊತೆ ತಿಹಾರ್ ಜೈಲಿಗೆ ತೆರಳಿದ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು. ಇನ್ನು, ಡಿ.ಕೆ. ಶಿವಕುಮಾರ್ ಪತ್ನಿಗೆ ಜಾರಿ ನಿರ್ದೆಶನಾಲಯ ನೀಡಿರುವ ಸಮನ್ಸ್ ರದ್ದು ಕೋರಿ ದೆಹಲಿ ಹೈಕೋರ್ಟ್ ಗೆ ಸಲ್ಲಿಸಿರುವ ಅರ್ಜಿ ವಿಚಾರಣೆ ಕೂಡ ಇಂದು ನಡೆಯಲಿದೆ. ಒಟ್ಟಾರೆಯಾಗಿ ಡಿಕೆಶಿಗೆ ಬೇಲ್ ಸಿಕ್ಕಿ ಹೊರಗಡೆ ಬರುತ್ತಾರಾ ಅಥವಾ ಮತ್ತಷ್ಟು ದಿನ ತಿಹಾರ್ ಜೈಲು ಪಾಲಾಗುತ್ತಾರ ಎಂಬುದನ್ನು ಕಾದು ನೋಡಬೇಕಿದೆ.
Comments