ನಿಮ್ಮ ಬಳಿ 'ಆಯುಷ್ಮಾನ್' ಆರೋಗ್ಯ ಕಾರ್ಡ್ ಇದೆಯಾ..? ಹಾಗಾದ್ರೆ ಇದನ್ನೊಮ್ಮೆ ಓದಿ..

ಈಗಾಗಲೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಸಾರ್ವಜನಿಕರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕೂಡ ಒಂದು… ಆ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುವ ಸಲುವಾಗಿ ಸರ್ಕಾರ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದರೆ ಕೆಲವೊಂದು ಯೋಜನೆಗಳು ಸಾರ್ವಜನಿಕರಿಗೆ ತಲುಪಿಲ್ಲ… ಅವುಗಳನ್ನು ತಲುಪಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ..
ಆದರೆ ಇದೀಗ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಸಮರ್ಪಕ ಜಾರಿಗೆ ಕ್ರಮ ಕೈಗೊಳ್ಳುವಂತೆ ಆರೋಗ್ಯ ಖಾತೆ ಸಚಿವ ಬಿ. ಶ್ರೀರಾಮಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಹತ್ವಾಕಾಂಕ್ಷಿ ಯೋಜನೆ ಆಗಿರುವ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ದಾರರನ್ನು ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿರುವ ಕುರಿತು ವೈದ್ಯರು ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಆಯುಷ್ಮಾನ್ ಭಾರತ್ ಕಾರ್ಡುದಾರರಿಗೆ ಆದ್ಯತೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಅತೀ ಶೀರ್ಘದಲ್ಲಿಯೇ ಖಾಸಗಿ ಆಸ್ಪತ್ರೆಗಳೊಂದಿಗೆ ಸಭೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದಾರೆ.
Comments