ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಿಂದ ಪ್ರತಿಭಟನೆ..!! ಯಾಕೆ ಗೊತ್ತಾ..?
ಸದ್ಯ ದೇಶದ ಸ್ಥಿತಿ ಅಷ್ಟು ಚೆನ್ನಾಗಿಲ್ಲ ಎಂಬುದು ಎಲ್ಲರಿಗೂ ಕೂಡ ತಿಳಿದೆ ಇದೆ.. ದೇಶದಲ್ಲಿ ಈಗಾಗಲೇ ಆರ್ಥಿಕ ಕುಸಿತ, ನಿರುದ್ಯೋಗದಂತಹ ಸಾಕಷ್ಟು ಸಮಸ್ಯೆಗಳು ತಲೆದೋರುತ್ತಿವೆ.. ಇವುಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ದ ದೇಶಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎನ್ನಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರವು ಜನ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಕಾಂಗ್ರೆಸ್ ನವೆಂಬರ್ 5ರಿಂದ ದೇಶಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ತಿಳಿಸಿದ್ದಾರೆ. ದೇಶದಲ್ಲಿ ಈಗಾಗಲೇ ಆರ್ಥಿಕ ಸಂಕಷ್ಟ ಎದುರಾಗಿದೆ. ನವೆಂಬರ್ 5 ರಿಂದ ನವೆಂಬರ್ 15ರ ವರೆಗೆ 10 ದಿನಗಳ ಕಾಲ ಎಲ್ಲಾ ರಾಜ್ಯಗಳ ರಾಜಧಾನಿ ಹಾಗೂ ಜಿಲ್ಲಾ ಮಟ್ಟದಲ್ಲೂ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ ಎಂದು ಅವರು ತಿಳಿಸಿದ್ದಾರೆ. ಒಟ್ಟಾರೆಯಾಗಿ ದೇಶದಲ್ಲಿ ಆಗುತ್ತಿರುವ ಬದಲಾವಣೆಯಿಂದಾಗಿ ಸಾಕಷ್ಟು ಅನಾನುಕೂಲವಾಗುತ್ತಿದೆ. ಹಾಗಾಗಿ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.
Comments