ಹೈದರಾಬಾದ್ ಎನ್ ಕೌಂಟರ್ ಹಲವರ ಅಪಸ್ವರ!

ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ತೆಲಂಗಾಣದ ಪಶುವೈದ್ಯೆ ಅವರ ಹತ್ಯಾಚಾರ ಮಾಡಿದವರನ್ನು ಯಮಪುರಿಗೆ ಅಟ್ಟಿದ ಸೈಬರಾಬಾದ್ ಪೊಲೀಸರ ನಡೆಗೆ ದೇಶಾದ್ಯಂತ ವ್ಯಾಪಕ ಪ್ರಶಂಸೆಗೆ ಒಳಗಾಗುತ್ತಿದೆ, ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಮೇನಕಾ ಗಾಂಧಿ,ಕಾರ್ತಿ ಚಿದಂಬರಂ ಇನ್ನು ಹಲವು ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ.
ಅತ್ಯಾಚಾರ ಹತ್ಯೆಯಂತಹ ಘಟನೆಗಳು ದೇಶಕ್ಕೆ ಭಯಂಕರ ವಿಚಾರವಾಗಿದೆ. ಆದರೆ, ನೀವು ಬಯಸಿದ್ದೀರಾ ಎಂಬ ಕಾರಣಕ್ಕೆ ಜನರನ್ನು ಕೊಲ್ಲಲು ಸಾಧ್ಯವಿಲ್ಲ. ಕಾನೂನು ಕೈಗೆತ್ತಿಕೊಳ್ಳುವುದು ಸರಿಯಲ್ಲ. ಅವರನ್ನು(ಆರೋಪಿಗಳು)ನ್ಯಾಯಾಲಯ ಯಾವುದೇ ರೀತಿಯಲ್ಲಾದರೂ ಗಲ್ಲು ಶಿಕ್ಷೆಗೆ ನೀಡುತ್ತಿತ್ತು ಎಂದು ಬಿಜೆಪಿ ಸಂಸದೆ ಮೇನಕಾ ಗಾಂಧಿ ಹೇಳಿದ್ದಾರೆ.
ದೇಶದ ಜನ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪೂರ್ಣ ಭರವಸೆ ಕಳೆದುಕೊಳ್ಳುವ ಮೊದಲೇ ಸರ್ಕಾರ ಎಚ್ಚೆತ್ತುಕೊಂಡು, ಕ್ರಿಮಿನಲ್ ಪ್ರಕರಣ ಗಳ ತ್ವರಿತ ವಿಚಾರಣೆ ನಡೆಸುವಂತೆ ನ್ಯಾಯಾಂಗ ವ್ಯವಸ್ಥೆಯನ್ನು ಸುಭದ್ರಗೊಳಿಸಬೇಕು ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಅತ್ಯಾಚಾರ ಮಾಡುವುದು ಅತ್ಯಂತ ಹೇಯ ಕೃತ್ಯ. ಕಾನೂನಿನ ಚೌಕಟ್ಟಿನಲ್ಲಿ ಇಂಥವರ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಬೇಕು. ಅತ್ಯಾಚಾರದಂಥ ಹೇಯ ಕೃತ್ಯ ಮಾಡಿದವರನ್ನು ನಾನು ಬೆಂಬಲಿಸದಿದ್ದರೂ ಎನ್ ಕೌಂಟರ್ ಮೂಲಕ ಅವರನ್ನು ಹತ್ಯೆ ಮಾಡುವುದು ಸಮಾಜಕ್ಕೆ ಅಂಟಿದ ಕಳಂಕ. ಅನ್ಯಾಯಕ್ಕೊಳಗಾದವರಿಗೆ ತ್ವರಿತಗತಿಯಲ್ಲಿ ನ್ಯಾಯ ದೊರಕಿಸಿಕೊಡಬೇಕಾಗಿರುವುದು ನಿಜವಾದರೂ ಈ ರೀತಿ ಎನ್ ಕೌಂಟರ್ ರೀತಿ ಬೇಕಾಗಿಲ್ಲ" ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Comments