ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ಮಾಜಿ ಸ್ಪೀಕರ್
ಮೈತ್ರಿ ಸರ್ಕಾರದ ಪತನದ ಬಳಿಕ ಕಾಂಗ್ರೆಸ್ ಶಾಸಕರೆಲ್ಲರೂ ಅಧಿಕಾರ ಕಳೆದುಕೊಂಡು ಆಡಳಿತ ಪಕ್ಷವನ್ನು ಟೀಕಿಸುವುದರಲ್ಲಿ ನಿರತರಾಗಿದ್ದರೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮಾತ್ರ ರಾಜಕೀಯದಿಂದ ಕೊಂಚ ದೂರ ಉಳಿದು ಕೃಷಿ ಚಟುವಟಿಕೆಗಳತ್ತ ಮುಖ ಮಾಡಿದ್ದಾರೆ.
ರಮೇಶ್‌ಕುಮಾರ್ ಶ್ರೀನಿವಾಸಪುರ ತಾಲ್ಲೂಕಿನಲ್ಲಿರುವ ತಮ್ಮ ಸ್ವಗ್ರಾಮ ಅಡ್ಡಗಲ್‌ನ ತೋಟದ ಮನೆಯಲ್ಲಿ ನಿರ್ಮಿಸಿರುವ ಶೆಡ್ ನಲ್ಲಿ ಕುರಿಗಳ ಸಾಕಣೆ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಶ್ರೀನಿವಾಸಪುರ ತಾಲ್ಲೂಕಿನ ರೋಜೇನಹಳ್ಳಿ ಸಂತೆಗೆ ಸಾಮಾನ್ಯ ರೈತರಂತೆ ಆಗಮಿಸಿ 150 ಕುರಿಗಳನ್ನು ಖರೀದಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Comments