ಅಯೋಧ್ಯೇಯಲ್ಲಿ ಮಸೀದಿ ನಿರ್ಮಾಣಕ್ಕೆ ಸ್ಥಳಗಳನ್ನು ಗುರುತಿಸಿದ ಯೋಗಿ ನೇತೃತ್ವದ ಯುಪಿ ಸರಕಾರ
ಅಯೋಧ್ಯೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮಸೀದಿ ನಿರ್ಮಾಣ ಮಾಡಲು ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರಕಾರ ಐದು ಸ್ಥಳಗಳನ್ನು ಗುರುತಿಸಿದೆ.
ಬಾಬ್ರಿ ಮಸೀದಿ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮಾಡಿ, ಮಸೀದಿ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಐದು ಎಕರೆ ಸ್ಥಳ ನೀಡಬೇಕೆಂದು ಸುಪ್ರೀಂಕೋರ್ಟ್ ನವೆಂಬರ್ 9 ರಂದು ನೀಡಿದ ತನ್ನ ಐತಿಹಾಸಿಕ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಉತ್ತರಪ್ರದೇಶ ಸರಕಾರ ಮಿರ್ಜಾಪುರ, ಶಂಶುದ್ದೀನ್ ಪುರ ಮತ್ತು ಚಾಂದ್ ಪುರ ನಲ್ಲಿ ಐದು ಸ್ಥಳಗಳನ್ನು ಗುರುತಿಸಿದ್ದು, ಈ ಪ್ರದೇಶ ಪವಿತ್ರ ಸ್ಥಳ ಎಂದು ಗುರುತಿಸಿರುವ ಪಂಚ್ ಕೋಶಿ ಪರಿಕ್ರಮದಿಂದ ಸುಮಾರು 15 ಕಿಲೋ ಮೀಟರ್ ದೂರದಲ್ಲಿದೆ ಎಂದು ವರದಿ ತಿಳಿಸಿದೆ. ಜೊತೆಗೆ ಸುಪ್ರೀಂ ಆದೇಶದಂತೆ ಸುನ್ನಿ ವಕ್ಫ್ ಬೋರ್ಡ್ ಟ್ರಸ್ಟಿಗಳು ಈ ಸ್ಥಳವನ್ನು ಪರಿಶೀಲಿಸಿ ಮಸೀದಿ ನಿರ್ಮಾಣಕ್ಕೆ ಯಾವ ಸ್ಥಳ ಸೂಕ್ತ ಎಂಬುದನ್ನು ತಿಳಿಸಲು ಉತ್ತರಪ್ರದೇಶ ಸರಕಾರ ಸೂಚನೆ ನೀಡಿದೆ ಎನ್ನಲಾಗಿದೆ.
Comments