ಕರ್ನಾಟಕಕ್ಕೆ ಗುಡ್ ನ್ಯೂಸ್- ಮಹದಾಯಿ ಅಧಿಸೂಚನೆಗೆ ಸುಪ್ರೀಂಕೋರ್ಟ್ ಸೂಚನೆ

ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆ ಈಡೇರಿಕೆ ಸನ್ನಿತವಾಗಿದೆ. ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಹದಾಯಿ ನ್ಯಾಯಾಧಿಕರಣ ನೀಡಿದ ಐ ತೀರ್ಪುನ ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚಿಸಿದೆ.
ವಿವಾದದ ಬಗ್ಗೆ ಜುಲೈ15ರಿಂದ ನಿರಂತರವಾಗಿ ಮಹದಾಯಿ ವಿವಾದದ ಮೇಲ್ಮನವಿಗಳ ವಿಚಾರಣೆ ನಡೆಸುವುದಾಗಿ ಹೇಳಿರುವ ಸುಪ್ರೀಂ ಪೀಠ, ಗೆಜೆಟ್ ನೋಟಿಫಿಕೇಶನ್ ಹೊರಡಿಸಬಹುದು ಎಂದು ತಿಳಿಸಿದೆ. ವಿಚಾರಣೆ ನಂತರ ನೀಡುವ ತೀರ್ಪಿನಲ್ಲಿ ಬದಲಾವಣೆ ಆದಲ್ಲಿ ಅಧಿಸೂಚನೆ ಬದಲಿಸಬೇಕು ಎಂದು ಸೂಚನೆ ನೀಡಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕಾಗಿದೆ ಎಂದು ವರದಿ ತಿಳಿಸಿದೆ.
Comments