ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ

28 Feb 2020 12:03 PM | General
428 Report

ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ಹೃದಯಾಘಾತವಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ 4 ದಿನದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿವಾಹದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿದೆ. ಬಳಿಕ ಎದೆ ನೋವು ಕಂಡುಬಂದ ಹಿನ್ನೆಲೆ ಭಾನುವಾರ ಅಪೋಲೋ  ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ವೈದ್ಯರ ಸಲಹೆಯಂತೆ ಕೆಲಕಾಲ ತಮ್ಮ ವಾರ್ಡ್‌ನಲ್ಲಿ ಓಡಾಡಿದ್ದಾರೆ ಎನ್ನಲಾಗಿದೆ.

Edited By

venki swamy

Reported By

venki swamy

Comments