ಕೇಂದ್ರದ ಮಾಜಿ ಸಚಿವ ಎಂ.ವಿ. ರಾಜಶೇಖರನ್ ನಿಧನ

ಕೇಂದ್ರದ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಎಂ.ವಿ.ರಾಜಶೇಖರನ್ (92) ಇಂದು ನಿಧನರಾಗಿದ್ದಾರೆ. ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಸೋಮವಾರ ಬೆಳಗ್ಗೆ ನಿಧನರಾದರು.
ರಾಜಶೇಖರನ್ ಅವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ .ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ,ಮಾಜಿ ಸಿ.ಎಂ ಹೆಚ್ .ಡಿ ಕುಮಾರಸ್ವಾಮಿ, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಬಿಜೆಪಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್ ರಾಜ್ಯಧ್ಯಕ್ಷ ಹೆಚ್ .ಕೆ.ಕುಮಾರಸ್ವಾಮಿ, ರಾಜ್ಯ ಸಚಿವರು, ಸೇರಿದಂತೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಮಗಳಾದ ಗಿರಿಜಾ ಅವರನ್ನು ವರಿಸಿದರು. ಗ್ರಾಮೀಣ ಆರ್ಥಿಕತೆಯ ವಿಚಾರದಲ್ಲಿ ಆಳವಾದ ಜ್ಞಾನ ಹೊಂದಿದ್ದರು. ಗ್ರಾಮೀಣ ಅಭಿವೃದ್ಧಿ ಕುರಿತು ಅಧ್ಯಯನ ಸಂಸ್ಥೆಯೊಂದನ್ನು ಸ್ಥಾಪಿಸಿದ್ದರು. ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಸದಸ್ಯರಾಗಿ ಅತ್ಯುತ್ತಮ ಸಂಸದೀಯ ಪಟುವಾಗಿ ಗುರುತಿಸಿಕೊಂಡಿದ್ದರು. ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ ಕೇಂದ್ರ ಯೋಜನೆ ಮತ್ತು ಅಂಕಿ ಅಂಶ ಖಾತೆಯ ರಾಜ್ಯ ಸಚಿವರಾಗಿ ಹೊಣೆಗಾರಿಕೆ ನಿಭಾಯಿಸಿದ್ದರು
Comments