ಪಾದರಾಯನಪುರದಲ್ಲಿ ರಕ್ಷಣೆಗೆ ಬಂದವರ ಮೇಲೆ ಅಟ್ಯಾಕ್ 54 ಮಂದಿ ಅರೆಸ್ಟ್

ಬೆಂಗಳೂರಿನ ಪಾದರಾಯನಪುರದಲ್ಲಿ ಪುಂಡರ ಹಾವಳಿ ಮುಂದುವರಿದಿದ್ದು, ಚೆಕ್ಪೋಸ್ಟ್ ಒಡೆದು ಹಾಕಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪಾದರಾಯನಪುರದ 58 ಕೊರೊನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಸಿಬ್ಬಂದಿ ಹೋಗಿದ್ದರು.
ಕಿಡಿಗೇಡಿಗಳು ದಾಂಧಲೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡು ಅಲ್ಲಿಂದ ತೆರಳಿದ್ದಾರೆ. ಇನ್ನು, ಪಾದರಾಯನಪುರದಲ್ಲಿ ನಡೆದ ದಾಂಧಲೆಗೆ ಸಂಬಂಧಿಸಿದಂತೆ ಇದುವರೆಗೂ 54 ಜನರನ್ನು ಬಂಧಿಸಲಾಗಿದೆ.
54 ಜನರ ಮೊಬೈಲ್ ವಶಕ್ಕೆ ಪಡೆದ ಪೊಲೀಸರು ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 353, 307, ಎನ್ ಡಿಎಂಎ 353, 332, 324, ಹಾಗೂ 201ರ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೆಂದ್ ಮುಖರ್ಜಿ ತಿಳಿಸಿದ್ದಾರೆ.
Comments