ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಬಗ್ಗೆ ರಾಜ್ಯದ ನಾಯಕರುಗಳು ಹೇಳಿದ್ದೆನು ?
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪನವರು, ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ ಕರೋನಾ ಸೋಂಕು ಪೀಡಿತ ಶಂಕಿತರನ್ನು ವಶಕ್ಕೆ ಪಡೆದು ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ.
ಜನಸಾಮಾನ್ಯರ ಜೀವ ರಕ್ಷಿಸಲು ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ತಮ್ಮ ಜೀವದ ಹಂಗು ತೊರೆದು ಸೇವೆ ಮಾಡುತ್ತಿದ್ದಾರೆ. ಅಂಥವರ ಮೇಲೆ ಕೊರೊನಾ ವೈರಸ್‌ಗಿಂತ ಕೆಟ್ಟದಾಗಿ ಕೆಲವರು ನಡೆದುಕೊಳ್ಳುತ್ತಿದ್ದಾರೆ. ಆರೋಗ್ಯ ರಕ್ಷಣೆಗೆ ಬಂದವರ ಮೇಲೆಯೆ ಮಾರಣಾಂತಿಕ ಹಲ್ಲೆ ಮಾಡುತ್ತಿದ್ದಾರೆ. ವಿರೋಧ ಪಕ್ಷಗಳ ನಾಯಕರೂ ಕೂಡ ಪಕ್ಷಾತೀತವಾಗಿ ಸರ್ಕಾರಕ್ಕೆ ಬೆಂಬಲ ಕೊಡುತ್ತಿದ್ದಾರೆ. ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳ ಹೆಡೆಮುರಿ ಕಟ್ಟಿ ಅಂತಾ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಪಾದರಾಯನಪುರದಲ್ಲಿ ಗಲಭೆಕೋರರು ಪುಂಡಾಟ ನಡೆಸಿದ್ದಾರೆ. ಹೀಗಾಗಿ ಅವರ ಮೇಲೆ ಯಾವುದೇ ರೀತಿಯ ಕನಿಕರ ತೋರಿಸುವ ಅಗತ್ಯ ಇಲ್ಲ. ಬದಲಾಗಿ ಕಠಿಣ ಕ್ರಮ ಕೈಗೊಳ್ಳಬೇಕು. ಹಿಂದೆ ಸಾದಿಕ್ ಪಾಳ್ಯದಲ್ಲೂ ಇಂತಹ ಘಟನೆ ನಡೆದಿತ್ತು. ಪಾದರಾಯನಪುರದ ಗಲಭೆಕೋರರ ಆಸ್ತಿ ಜಪ್ತಿ ಮಾಡಬೇಕು. ಈ ಮೂಲಕ ಆಗಿರುವ ನಷ್ಟವನ್ನು ಅವರಿಂದಲೇ ವಸೂಲು ಮಾಡಬೇಕು. ಇಷ್ಟು ಮಾತ್ರವಲ್ಲದೆ ದುಷ್ಕರ್ಮಿಗಳಿಗೆ ಪ್ರಚೋದನೆ ಕೊಟ್ಟವರ ವಿರುದ್ಧವೂ ಕಠಿಣ ಕ್ರಮ ತಗೋಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ ರವಿ ಆಗ್ರಹಿಸಿದ್ದಾರೆ.
Comments