ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ವೇತನ ಕಡಿತದ ಪ್ರಸ್ತಾಪಕ್ಕೆ ಸಿಎಂ ಯಡಿಯೂರಪ್ಪ ನಕಾರ?

ಕೊರೋನಾ ಬಿಕ್ಕಟ್ಟು ಹಿನ್ನೆಲೆಯಲ್ಲಿ ವಿಪರೀತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರ ಕೇಂದ್ರ ಸರ್ಕಾರ ಅಥವಾ ಕೇರಳ ಸರ್ಕಾರದ ಮಾದರಿಯಲ್ಲಿ ರಾಜ್ಯದಲ್ಲೂ ನೌಕರರ ಸಂಬಳ ಕಟ್ ಮಾಡುವ ಸಾಧ್ಯತೆ ಇದೆ ಎಂಬ ಮಾತು ಕೇಳಿಬರುತ್ತಿತ್ತು. ಆದರೆ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಂತಿಮ ಕ್ಷಣದಲ್ಲಿ ಈ ನಿರ್ಧಾರಕ್ಕೆ ಅಸಮ್ಮತಿ ವ್ಯಕ್ತಪಡಿಸಿದ್ಧಾರೆನ್ನಲಾಗಿದೆ.
ರಾಜ್ಯ ಸರ್ಕಾರ ಕೇರಳ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳವನ್ನು 6 ಕಂತುಗಳಲ್ಲಿ ಕಟ್ ಮಾಡುವ ಪ್ರಸ್ತಾವನೆಯೂ ಇತ್ತು. ನಿನ್ನೆ ಸಿಎಂ ನೇತೃತ್ವದಲ್ಲಿ ನಡೆದ ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಎಲ್ಲಾ ವಿಚಾರಗಳು ಚರ್ಚೆಯಾಗಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯ ಸರ್ಕಾರಿ ನೌಕರರ ವೇತನ ಕಡಿತ ಮಾಡುವುದು ಬೇಡ ಎಂದಿದ್ದಾರೆ ಎನ್ನಲಾಗಿದೆ.
Comments