ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಡುಗು ಸಹಿತ ಧಾರಾಕಾರ ಮಳೆ

ಇಂದು ಬೆಳಂಬೆಳಗ್ಗೆಯೇ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ರಸ್ತೆಗಳು ಜಲಾವೃತವಾಗಿ ನಾಗರಿಕರು ತೊಂದರೆಗೀಡಾಗಿದ್ದಾರೆ. ಒಂದೆಡೆ ಕೊರೊನಾ ಆತಂಕ ತಲ್ಲಣ ಸೃಷ್ಟಿಸಿದ್ದು, ಇದರ ಬೆನ್ನಲ್ಲೇ ಧಾರಾಕಾರ ಮಳೆ ಉದ್ಯಾನನಗರಿ ನಾಗರಿಕರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ. ಕೆಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ನಿವಾಸಿಗಳ ಪಾಡು ಹೇಳತೀರದಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆ 5 ಗಂಟೆ ಸುಮಾರಿಗೆ ಮಳೆ ಸುರಿಯಲು ಆರಂಭವಾಗಿತ್ತು. ಮೆಜೆಸ್ಟಿಕ್, ಶಾಂತಿನಗರ, ವಿಲ್ಸನ್ ಗಾರ್ಡನ್,ಲ ಕ್ಕಸಂದ್ರ, ಗಿರಿನಗರ, ನಾಗೇಂದ್ರ ಬ್ಲಾಕ್, ಹೊಸಕೆರೆ ಹಳ್ಳಿ, ಇಂದಿರಾ ನಗರ, ಚಾಮರಾಜ ಪೇಟೆ, ಶ್ರೀರಾಂಪುರ, ರಾಜಾಜಿ ನಗರ, ಆರ್ ಆರ್ ನಗರ ಸೇರಿದಂತೆ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಿದೆ.
Comments