ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಶಿಕ್ಷಣ ಇಲಾಖೆಯಿಂದ 'ಗುಡ್ ನ್ಯೂಸ್'

ಕೊರೋನಾ ನಿಯಂತ್ರಿಸಲು ಲಾಕ್ಡೌನ್ ಹೇರಲಾಗಿದ್ದು, ಅದೆಷ್ಟೋ ಕೈಗಳಿಗೆ ಕೆಲಸವಿಲ್ಲದೆ ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಗಿರುವುದರಿಂದ ಈ ಬಾರಿ ಶಾಲೆಗಳ ಶುಲ್ಕ ಹೆಚ್ಚಳ ಮಾಡದಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಖಾಸಗಿ ಶಾಲಾ ಆಡಳಿತ ಮಂಡಳಿಯವರು 2020 -21 ನೇ ಸಾಲಿಗೆ ಶುಲ್ಕ ಹೆಚ್ಚಳ ಮಾಡಬಾರದು. ಕಳೆದ ಸಾಲಿನಲ್ಲಿ ಪಡೆದ ಶುಲ್ಕಕ್ಕಿಂತ ಕಡಿಮೆ ಶುಲ್ಕ ಪಡೆಯಲು ಇಚ್ಛಿಸಿದಲ್ಲಿ ಸ್ವತಂತ್ರ ನಿರ್ಧಾರ ಕೈಗೊಳ್ಳಬಹುದು ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಆದೇಶ ಉಲ್ಲಂಘಿಸಿದರೆ ಶಾಲೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರತಿವರ್ಷ ಶೇಕಡ 15ರಷ್ಟು ಶುಲ್ಕ ಏರಿಕೆ ಮಾಡಲು ಅವಕಾಶ ಇತ್ತು. ಈಗ ಶುಲ್ಕ ಹೆಚ್ಚಳ ಮಾಡದೇ ಪೋಷಕರ ಇಚ್ಛೆಯಂತೆ ಶುಲ್ಕ ಪಡೆದುಕೊಳ್ಳಲು ಸೂಚಿಸಿದೆ.
Comments