ಲಾಕ್ಡೌನ್ ಬಳಿಕ ವಿಶಾಖಪಟ್ಟಣಂ ವಿಷಾನಿಲ ದುರಂತ
ದೇಶ ಕೊರೊನಾ ಹಾವಳಿಯಿಂದ ತತ್ತರಿಸಿರುವ ನಡುವೆಯೇ ಇಂದು ಮುಂಜಾನೆ ಜಿಲ್ಲೆಯ ಆರ್.ಆರ್.ವೆಂಕಟಪುರಂನ ಎಲ್.ಜಿ. ಪಾಲಿಮರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ರಾಸಾಯನಿಕ ಅನಿಲ ಕಾಖಾನೆಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲಿನ ಪ್ರದೇಶಗಳಿಗೆ ಹರಡಿದೆ.
ಎಲ್.ಜಿ.ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಇದೀಗ ಏರಿಕೆಯಾಗಿದೆ. ಈಗಾಗಲೇ 10 ಜನರು ವಿಷಾನಿಲ ಸೇವಿಸಿ ಮೃತಪಟ್ಟಿದ್ದು, 800 ಕ್ಕೂ ಹೆಚ್ಚು ಜನ ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 5000 ಜನಕ್ಕೆ ನೇರವಾಗಿ ವಿಷಾನಿಲ ತಟ್ಟಿದೆ.ಇತ್ತ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ”ವಿಶಾಖಪಟ್ಟಣಂನಲ್ಲಿ ಎಲ್ಲರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ.
Comments